ಶನಿವಾರ, ಮಾರ್ಚ್ 25, 2023
30 °C

ದೊಡ್ಡಬಳ್ಳಾಪುರ: ಸಾಯಿಬಾಬಾ ದೇವಾಲಯದ ವಾರ್ಷಿಕೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಬೆಸೆಂಟ್‌ ಪಾರ್ಕ್ ರಸ್ತೆಯ ಶಿರಡಿ ಸಾಯಿಬಾಬಾ ದೇವಾಲಯದಲ್ಲಿ ಶಿರಡಿ ಸಾಯಿಬಾಬಾ ಸೇವಾ ಟ್ರಸ್ಟ್ ವತಿಯಿಂದ 9ನೇ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು.

ಬೆಳಿಗ್ಗೆ ನಡೆದ ಕಾಕಡಾರತಿ, ಪನ್ನೀರು ಅಭಿಷೇಕದಲ್ಲಿ ಭಕ್ತಾದಿಗಳು ಪನ್ನೀರು ಅಭಿಷೇಕ ನೆರವೇರಿಸಿದರು. ನಂತರ ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ, ವಿಶೇಷ ಪೂಜೆ ಹಾಗೂ ಭಜನೆ ಆರತಿ ದೂಪ ಪೂಜಾ ಕಾರ್ಯಕ್ರಮಗಳು ನಡೆದವು.

ಭಕ್ತಾದಿಗಳಿಗೆ ಪ್ರಸಾದ ವಿತರಿಸಲಾಯಿತು. ಸಂಜೆ ಸಾಯಿ ಭಜನಾ ಮಂಡಳಿಯಿಂದ ಭಜನೆ ನಡೆಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.