ಶನಿವಾರ, ಸೆಪ್ಟೆಂಬರ್ 18, 2021
29 °C

ಪ್ರೋತ್ಸಾಹ ಅಂಕ ನೀಡಲು ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೇವನಹಳ್ಳಿ: ದೇಶದಲ್ಲಿ ಹತ್ತನೇ ತರಗತಿ ಪರೀಕ್ಷೆ ರದ್ದಾಗಿದ್ದರೂ ರಾಜ್ಯದಲ್ಲಿ ಸಾರ್ವಜನಿಕರ ವಿರೋಧದ ನಡುವೆಯೂ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯು ಪರೀಕ್ಷೆ ನಡೆಸಿದೆ. ಫಲಿತಾಂಶದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡ, ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರು, ಬಡವಿದ್ಯಾರ್ಥಿಗಳಿಗೆ ಭವಿಷ್ಯಕ್ಕೆ ಅನುಕೂಲವಾಗುವಂತೆ ಒಂದೊಂದು ವಿಷಯಕ್ಕೆ ಕನಿಷ್ಠ 10 ಪ್ರೋತ್ಸಾಹ ಅಂಕಗಳನ್ನು ನೀಡಬೇಕು ಎಂದು ದಸಂಸ ರಾಜ್ಯ ಸಂಘಟನಾ ಸಂಚಾಲಕ ಕಾರಹಳ್ಳಿ ಶ್ರೀನಿವಾಸ್ ಒತ್ತಾಯಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ದಲಿತ ಸಂಘರ್ಷ ಸಮಿತಿ ಒಕ್ಕೂಟ, ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ), ರೈತ ಸಂಘದಿಂದ ನಡೆದ ಸಭೆಯಲ್ಲಿ ಮಾತನಾಡಿದರು.

ಗ್ರಾಮೀಣ ರೈತರ ಮಕ್ಕಳು, ಗುಡ್ಡಗಾಡು ಪ್ರದೇಶಗಳಲ್ಲಿ ವಾಸವಾಗಿರುವ ಮಕ್ಕಳು ಸೇರಿದಂತೆ ಸಾಕಷ್ಟು ಮಕ್ಕಳು ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ಉಳ್ಳವರ ಮಕ್ಕಳು ಆನ್‌ಲೈನ್ ತರಗತಿ ಮೂಲಕವಾದರೂ ಶಿಕ್ಷಣ ಪಡೆದುಕೊಂಡು ಪರೀಕ್ಷೆ ಬರೆದಿದ್ದಾರೆ ಎಂದರು.

ಆದರೆ, ಬಡವರ ಮಕ್ಕಳಿಗೆ ಈ ಸೌಲಭ್ಯಗಳಿಲ್ಲದ ಕಾರಣ ಅವರು ಪರೀಕ್ಷೆ ಬರೆಯಲು ಸ್ಮಾರ್ಟ್‌ಫೋನ್‌ಗಳು, ಮನೆಗಳಲ್ಲಿ ಟಿ.ವಿ ಗಳಿಲ್ಲದ ಶೇ 30ರಷ್ಟು ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಇದರಿಂದ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಲ್ಲಿ ಸಾಕಷ್ಟು ಪ್ರತಿಭಾವಂತ ವಿದ್ಯಾರ್ಥಿಗಳು ಹೆಚ್ಚು ಅಂಕ ಪಡೆಯುವ ಅವಕಾಶಗಳಿಂದ ವಂಚಿತರಾಗಿದ್ದಾರೆ. ಆದ್ದರಿಂದ ಪ್ರೋತ್ಸಾಹ ಅಂಕಗಳು ನೀಡಬೇಕು ಎಂದು ಒತ್ತಾಯಿಸಿದರು.

ತಾಲ್ಲೂಕು ಘಟಕದ ಪ್ರಧಾನ ಸಂಚಾಲಕ ಪಿ. ನರಸಪ್ಪ ಮಾತನಾ ಡಿದರು. ಜಿಲ್ಲಾ ಸಂಘಟನಾ ಸಂಚಾಲಕ ಜೋಗಹಳ್ಳಿ ನಾರಾಯಣಸ್ವಾಮಿ, ರಾಮನಾಥಪುರ ಮುನಿರಾಜು, ರಮೇಶ್, ಸಿ.ಬಿ. ಮೋಹನ್, ಸಿ.ಎಂ. ಮುರಳೀಧರ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.