ಗುರುವಾರ , ಆಗಸ್ಟ್ 11, 2022
23 °C

ಏಕಕಾಲಕ್ಕೆ ಎರಡು ಚುನಾವಣೆ ದಿನ ಬದಲಾವಣೆಗೆ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೇವನಹಳ್ಳಿ: ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಮತ್ತು ದೇವನಹಳ್ಳಿ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಿಗೆ ಹಾಗೂ ಜಿಲ್ಲಾ ಸಹಕಾರ ಬ್ಯಾಂಕ್ ನಿರ್ದೇಶಕರ ಸ್ಥಾನಗಳಿಗೆ ಡಿ. 27ರಂದು ಏಕಕಾಲಕ್ಕೆ ಚುನಾವಣೆ ಘೊಷಣೆಯಾಗಿದೆ. ಈ ಪೈಕಿ ಯಾವುದಾದರೂ ಒಂದು ಚುನಾವಣೆಯ ದಿನಾಂಕವನ್ನು ಬದಲಾವಣೆ ಮಾಡಬೇಕು ಎಂದು ಎಪಿಎಂಸಿ ಮಾಜಿ ಅಧ್ಯಕ್ಷ ಕೆ.ವಿ. ಮಂಜುನಾಥ್ ಒತ್ತಾಯಿಸಿದರು.

ಇಲ್ಲಿನ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಮಾತನಾಡಿದ ಅವರು, ಜಿಲ್ಲಾ ಸಹಕಾರ ಸಂಘದ ನಿರ್ದೇಶಕರ ಆಯ್ಕೆಗೆ ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಯ ವ್ಯವಸಾಯ ಸೇವಾ ಸಹಕಾರ ಸಂಘ, ಮಹಿಳಾ ಸೇವಾ ಸಹಕಾರ ಸಂಘ, ಭೂ ಅಭಿವೃದ್ಧಿ ಸಹಕಾರ ಬ್ಯಾಂಕ್, ತಾಲ್ಲೂಕು ವ್ಯವಸಾಯೋತ್ಪನ್ನ ಮಾರುಕಟ್ಟೆ ಸಹಕಾರ ಸಂಘ ಮತ್ತು ಹಾಲು ಉತ್ಪಾದಕರ ಸಹಕಾರ ಸಂಘಗಳ 375ಕ್ಕೂ ಹೆಚ್ಚು ನೋಂದಾಯಿತ ಸದಸ್ಯರಿದ್ದಾರೆ. ಡಿಸಿಸಿ ಬ್ಯಾಂಕ್‌ನ 26 ನಿರ್ದೇಶಕರನ್ನು ಆಯ್ಕೆ ಮಾಡಬೇಕಿದೆ ಎಂದರು.

ಕೆಲವರು ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ವರ್ಧಿಸುವವರಿದ್ದಾರೆ. ಕೆಲವರು ಪಂಚಾಯಿತಿ ಚುನಾವಣೆ ಮತ್ತು ಡಿಸಿಸಿ ಬ್ಯಾಂಕ್ ಚುನಾವಣೆಗೆ ಮತದಾನ ಮಾಡಬೇಕು. ಇದರಿಂದ ಸಂಕಷ್ಟದ ಪರಿಸ್ಥಿತಿ ಎದುರಾಗಿದೆ ಎಂದು ಹೇಳಿದರು.

ಡಿಸಿಸಿ ಬ್ಯಾಂಕ್ ನಿರ್ದೇಶಕರ ಆಯ್ಕೆಯು ಮೂರು ತಿಂಗಳ ಹಿಂದೆಯೇ ಆಗಬೇಕಿತ್ತು. ನ್ಯಾಯಾಲಯ
ದಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ನ್ಯಾಯಾಲಯದ ಆದೇಶದಂತೆ ಡಿ. 27ರಂದು ಚುನಾವಣೆ ನಡೆಸುವಂತೆ ಆದೇಶವಾಗಿದೆ. ಈ ಸಂಬಂಧ ಸೃಷ್ಟಿಯಾಗಿರುವ ಗೊಂದಲ ಬಗೆಹರಿಸಬೇಕು ಎಂದು ಆಗ್ರಹಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು