ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೊಡ್ಡಬಳ್ಳಾಪುರ: ನವೋದಯ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ 

Last Updated 28 ನವೆಂಬರ್ 2021, 4:50 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ:ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾದ ನವೋದಯವಿದ್ಯಾಲಯ ಸಮಿತಿಯಿಂದ 2022-23ನೇ ಸಾಲಿಗೆ ಜವಾಹರ್‌ನವೋದಯ ವಿದ್ಯಾಲಯಗಳಲ್ಲಿ 6ನೇ ತರಗತಿಗೆ ಪ್ರವೇಶ ಪರೀಕ್ಷೆ ಮೂಲಕ ಆಯ್ಕೆ ಮಾಡಲು ಆಸಕ್ತ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕಅರ್ಜಿ ಆಹ್ವಾನಿಸಲಾಗಿದೆ.

ಜವಾಹರ್‌ ನವೋದಯ ವಿದ್ಯಾಲಯ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲೆಗಳ ಸರ್ಕಾರಿ, ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಗಳಲ್ಲಿ 2021-22ನೇ ಸಾಲಿನಲ್ಲಿ 5ನೇ ತರಗತಿಯಲ್ಲಿ ಓದುತ್ತಿರಬೇಕು.

ಸರ್ಕಾರ, ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಯಲ್ಲಿ 3 ಮತ್ತು 4ನೇ ತರಗತಿಗಳಲ್ಲಿ ಪೂರ್ಣ ಶೈಕ್ಷಣಿಕ ವರ್ಷ ಮುಗಿಸಿ ಉತ್ತೀರ್ಣರಾಗಿರಬೇಕು. 2009ರ ಮೇ 1ರಿಂದ 2013ರ ಏ. 30ರ ಒಳಗೆ (ಎರಡು ದಿನಗಳು ಸೇರಿ) ಜನಿಸಿರಬೇಕು.

2022ರ ಏ. 30ರಂದುಆಯ್ಕೆ ಪರೀಕ್ಷೆ ನಡೆಸಲಾಗುವುದು. ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ನ. 30 ಕೊನೆಯ ದಿನವಾಗಿದೆ ಎಂದು ಪ್ರಾಂಶುಪಾಲ ಚಕ್ರವರ್ತಿತಿಳಿಸಿದ್ದಾರೆ.

ಹೆಚ್ಚಿನ ವಿವರ ಹಾಗೂ ಅರ್ಜಿ ಸಲ್ಲಿಸಲು ವೆಬ್‌ಸೈಟ್ www.navodaya.gov.in ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ
ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT