ಮುಕ್ತ ನಿಧಿ ಸೌಲಭ್ಯಕ್ಕೆ ಅರ್ಜಿ
ದೊಡ್ಡಬಳ್ಳಾಪುರ: ನಗರಸಭೆಯ 2021-2022ನೇ ಸಾಲಿನ ಎಸ್‍ಎಫ್‍ಸಿ ಮುಕ್ತನಿಧಿ ಹಾಗೂ ನಗರಸಭಾ ನಿಧಿಯ ಶೇ 24.10 ಹಾಗೂ ಶೇ 7.25ರ ಯೋಜನೆಯ ಕಲ್ಯಾಣ ಕಾರ್ಯಕ್ರಮಗಳಿಗೆ ಕಾಯ್ದಿರಿಸಲಾಗಿರುವ ಅನುದಾನಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಿಂದ ಅನುಮೋದನೆಯಾದ ಕ್ರಿಯಾಯೋಜನೆಯಂತೆ ವಿದ್ಯಾಭ್ಯಾಸ, ವೈದ್ಯಕೀಯ, ವಸತಿ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಫಲಾನುಭವಿಗಳು ನಿಗದಿತ ಅರ್ಜಿಯೊಂದಿಗೆ ಸಂಬಂಧಪಟ್ಟ ದಾಖಲಾತಿಗಳ ಪ್ರತಿಗಳನ್ನು ಲಗತ್ತಿಸಿ ಜುಲೈ 3ರ ಒಳಗೆ ನಗರಸಭಾ ಕಚೇರಿಗೆ ಸಲ್ಲಿಸಬೇಕಿದೆ. ಹೆಚ್ಚಿನ ಮಾಹಿತಿಗೆ ಸಂಬಂಧಪಟ್ಟ ಶಾಖಾಧಿಕಾರಿ ಅಥವಾ ವಿಷಯ ನಿರ್ವಾಹಕರನ್ನು ಸಂಪರ್ಕಿಸಬೇಕು ಎಂದು ಪೌರಾಯುಕ್ತ ರಮೇಶ್ ಎಸ್. ಸುಣಗಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.