ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವನಹಳ್ಳಿ: ರೈತ ಶಕ್ತಿ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

Last Updated 22 ಜುಲೈ 2022, 5:41 IST
ಅಕ್ಷರ ಗಾತ್ರ

ದೇವನಹಳ್ಳಿ: ಬಜೆಟ್‌ನಲ್ಲಿ ರಾಜ್ಯದ ಕೃಷಿ ಉತ್ಪಾದಕತೆ ಹೆಚ್ಚಿಸಲು ಒತ್ತು ನೀಡಲಾಗಿದೆ.

ಈ ಹಿನ್ನೆಲೆಯಲ್ಲಿ ಕೃಷಿ ಯಂತ್ರೋಪಕರಣಗಳನ್ನು ಪ್ರೋತ್ಸಾಹಿಸಲು ಹಾಗೂ ಇಂಧನ ವೆಚ್ಚದ ಭಾರ ಕಡಿಮೆ ಮಾಡಲು ಪ್ರತಿ ಎಕರೆಗೆ ₹ 250ರಂತೆ ಗರಿಷ್ಠ 5 ಎಕರೆಗೆ ₹ 1,250ರ ವರೆಗೆ ಡಿಬಿಟಿ (ನೇರ ನಗದು ವರ್ಗಾವಣೆ) ಮೂಲಕ ಡೀಸಲ್‌ಗೆ ಸಹಾಯಧನ ನೀಡಲಾಗುತ್ತದೆ. ಕೃಷಿ ಇಲಾಖೆಯಿಂದ ರೈತ ಶಕ್ತಿ ಯೋಜನೆಯಡಿ ಈ ಸೌಲಭ್ಯ ಪಡೆಯಲು ರೈತರು ಫ್ರೂಟ್ಸ್ ಪೋರ್ಟಲ್‌ನಲ್ಲಿ ಹೆಸರು ನೋಂದಾಯಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಫ್ರೂಟ್ಸ್‌ನಲ್ಲಿ ನೋಂದಣಿಯಾಗಿರದಿದ್ದರೆ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ಖಾತೆ, ಪಹಣಿ ವಿವರ ಮತ್ತು ಜಾತಿ ಪ್ರಮಾಣ ಪತ್ರದೊಂದಿಗೆ ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಕಚೇರಿಯಲ್ಲಿ ಸರ್ವೆ ನಂಬರ್, ಭೂ ಹಿಡುವಳಿ ಸೇರಿಸುವುದರೊಂದಿಗೆ ಆಗಸ್ಟ್ 20ರೊಳಗೆ ಸೇರಿಸಿಕೊಳ್ಳಬೇಕು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT