ದೊಡ್ಡಬಳ್ಳಾಪುರ: ತಾಲ್ಲೂಕಿನಲ್ಲಿ ಕೋವಿಡ್ ಲಸಿಕೆ ಅಭಿಯಾನದಲ್ಲಿ ಶೇ 100ರಷ್ಟು ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಸೂಚಿಸಿರುವ ಹಿನ್ನೆಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸಿ ತಹಶೀಲ್ದಾರ್ ಮೋಹನಕುಮಾರಿ ಆದೇಶ ಹೊರಡಿಸಿದ್ದಾರೆ.

ಭಾನುವಾರ ತಾಲ್ಲೂಕಿನ 16 ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಅವರು ಭೇಟಿ ನೀಡಿ ಪರಿಶೀಲಿಸಿದರು.

ದೊಡ್ಡಬಳ್ಳಾಪುರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನಗರಸಭೆ ಪೌರಾಯುಕ್ತ ರಮೇಶ್ ಎಸ್. ಸುಣಗಾರ್, ಬಾಶೆಟ್ಟಹಳ್ಳಿಯ ಮುಖ್ಯ ಅಧಿಕಾರಿ ಮುನಿರಾಜ್, ಕಾರ್ಮಿಕ ನಿರೀಕ್ಷಕ ಪ್ರದೀಪ್, ದೊಡ್ಡತುಮಕೂರು ಆರೋಗ್ಯ ಕೇಂದ್ರಕ್ಕೆ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಸುನೀಲ್, ಕೊನಘಟ್ಟ ಆರೋಗ್ಯ ಕೇಂದ್ರಕ್ಕೆ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಸುಶೀಲಮ್ಮ, ತೂಬಗೆರೆ ಆರೋಗ್ಯ ಕೇಂದ್ರಕ್ಕೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸೋಮಶೇಖರ್ ಅವರನ್ನು ನೇಮಿಸಲಾಗಿದೆ.

ಮೆಳೇಕೋಟೆ ಆರೋಗ್ಯ ಕೇಂದ್ರಕ್ಕೆ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ದೀಪಾ, ಎಸ್.ಎಸ್. ಘಾಟಿ ಆರೋಗ್ಯ ಕೇಂದ್ರಕ್ಕೆ ಬಿಇಒ ಶುಭಮಂಗಳಾ, ಆರೂಢಿ, ಸಾಸಲು, ಹಾಲೇನಹಳ್ಳಿ, ಕಾಡನೂರು ಆರೋಗ್ಯ ಕೇಂದ್ರಕ್ಕೆ ಸಿಡಿಪಿಒ ಅನಿತಾಲಕ್ಷ್ಮೀ, ಮರಳೇನಹಳ್ಳಿ ಆರೋಗ್ಯ ಕೇಂದ್ರಕ್ಕೆ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಹನುಮಂತಪ್ಪ ಎಚ್. ಹಿಂದಿನಮನೆ ಅವರನ್ನು ನೇಮಿಸಲಾಗಿದೆ.

ಕನಸವಾಡಿ ಆರೋಗ್ಯ ಕೇಂದ್ರಕ್ಕೆ ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ ಪುಟ್ಟಹನುಮಂತರಾಯಪ್ಪ, ಕಮ್ಮಸಂದ್ರ ಮತ್ತು ಕನಸವಾಡಿ ಆರೋಗ್ಯ ಕೇಂದ್ರಕ್ಕೆ ಕೈಗಾರಿಕಾ ವಿಸ್ತರಣಾಧಿಕಾರಿ ನಾರಾಯಣಪ್ಪ, ಕೋನೇನಹಳ್ಳಿ ಆರೋಗ್ಯ ಕೇಂದ್ರಕ್ಕೆ ಹಿಂದುಳಿದ ವರ್ಗಗಳ ಇಲಾಖೆಯ ಸಹಾಯಕ ನಿರ್ದೇಶಕಿ ಅನಿತಾದೇವಿ ಎನ್. ನಾಯಕ್, ಹುಲಿಕುಂಟೆ ಆರೋಗ್ಯ ಕೇಂದ್ರಕ್ಕೆ ಅಕ್ಷರ ದಾಸೋಹ ಅಧಿಕಾರಿ ಎಚ್.ಎಸ್. ದ್ರಾಕ್ಷಾಯಿಣಿ, ದೊಡ್ಡಹೆಜ್ಜಾಜಿ ಆರೋಗ್ಯ ಕೇಂದ್ರಕ್ಕೆ ಸಹಕಾರ ಸಂಘಗಳ ನಿಂಬಂಧಕರ ಕಚೇರಿಯ ಆರೀಫ್ ಉಲ್ಲಾ ಷರೀಫ್ ಅವರನ್ನು ನೇಮಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.