ಸೋಮವಾರ, ಏಪ್ರಿಲ್ 12, 2021
23 °C
ಪೌರಾಡಳಿತ ಸಚಿವ ಎಂ.ಟಿ.ಬಿ. ನಾಗರಾಜ್ ಅಭಿಮತ

ಅಲ್ಪಸಂಖ್ಯಾತರಿಗೆ ಸೂಕ್ತ ಭದ್ರತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಕೋಟೆ: ‘ಕಾಂಗ್ರೆಸ್ ಪಕ್ಷವು ಬಿಜೆಪಿಯನ್ನು ಅಲ್ಪಸಂಖ್ಯಾಂತರ ವಿರೋಧಿಯೆಂದು ಮುಸ್ಲಿಂ ಜನಾಂಗದವರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಆದರೆ, ಬಿಜೆಪಿಯಿಂದ ಅಲ್ಪಸಂಖ್ಯಾಂತರು ಸುರಕ್ಷಿತರಾಗಿದ್ದಾರೆ’ ಎಂದು ಪೌರಾಡಳಿತ ಹಾಗೂ ಸಕ್ಕರೆ ಸಚಿವ ಎಂ.ಟಿ.ಬಿ. ನಾಗರಾಜ್ ಹೇಳಿದರು.

ನಗರದ ಸಮದ್ ಪ್ಯಾಲೇಸ್‌ನಲ್ಲಿ ಬುಧವಾರ ನಡೆದ ಬಿಜೆಪಿ ಅಲ್ಪಸಂಖ್ಯಾತ ಘಟಕದ ಜಿಲ್ಲಾ ಪಧಾದಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 

ಬಿಜೆಪಿ ದೇಶದ ಅತಿ ದೊಡ್ಡ ಪಕ್ಷವಾಗಿದ್ದು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತವನ್ನು ಅಭಿವೃದ್ಧಿಯತ್ತ ಮುನ್ನಡೆಸುತ್ತಿದೆ ಎಂದರು.

ಬಿಜೆಪಿ ಅಧಿಕಾರದಲ್ಲಿರುವಾಗ ಯಾವೊಬ್ಬ ಮುಸ್ಲಿಂ ವ್ಯಕ್ತಿಗೂ ಕಿಂಚತ್ತು ತೊಂದರೆಯಾಗಿಲ್ಲ. ಅದರ ಬದಲಾಗಿ ಅಲ್ಪಸಂಖ್ಯಾತರು ನೆಮ್ಮದಿಯಿಂದ ಬದುಕನ್ನು ಸಾಗಿಸಲು ಬೇಕಾದ ಸೂಕ್ತ ಭದ್ರತೆ ನೀಡುವ ಕೆಲಸ ಮಾಡುತ್ತಿದೆ. ಇದನ್ನು ದೇಶದ ಪ್ರತಿಯೊಬ್ಬ ಮುಸ್ಲಿಂ ಬಾಂಧವರೂ ಅರಿತುಕೊಳ್ಳಬೇಕು. ರಾಜ್ಯ ಹಾಗೂ ದೇಶದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಎಂದಿಗೂ ಅಲ್ಪಸಂಖ್ಯಾತರ ವಿರೋಧಿಯಲ್ಲ ಎಂದು ಹೇಳಿದರು.

ಬಿಜೆಪಿ ಅಲ್ಪಸಂಖ್ಯಾತರ ಘಟಕದ ರಾಜ್ಯ ಘಟಕದ ಅಧ್ಯಕ್ಷ ಮುಜಾಮಿಲ್ ಬಾಬು ಮಾತನಾಡಿ, ಕಳೆದ 70 ವರ್ಷಗಳ ಕಾಲ ದೇಶವನ್ನಾಳಿದ ಕಾಂಗ್ರೆಸ್ ತನ್ನ ರಾಜಕೀಯ ಲಾಭಕ್ಕಾಗಿ ಜಾತಿ, ಮತ, ಪಂಥಗಳ ನಡುವ ಕಂದಕ ಸೃಷ್ಟಿಸುತ್ತಿದೆ. ಒಡೆದು ಆಳುವ ನೀತಿ ಮಾಡಿದೆ. ಆದರೆ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಪ್ರತಿಯೊಂದು ಸಮುದಾಯವೂ ಸಾಮರಸ್ಯದಿಂದ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗಿದೆ. ಸಾಮರಸ್ಯದ ಬದುಕು ಹಾಗೂ ದೇಶದ ಅಭಿವೃದ್ಧಿಗಾಗಿ ಬಿಜೆಪಿಯನ್ನು ಬೆಂಬಲಿಸುವ ಕೆಲಸವನ್ನು ಅಲ್ಪಸಂಖ್ಯಾತರು ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಯ್ಯದ್ ಸಲೀಂ, ಜಿಲ್ಲಾ ಬಿಜೆಪಿ ಅಧ್ಯಕ್ಷ ಎ.ವಿ.ಎನ್. ನಾರಾಯಣಸ್ವಾಮಿ, ಅಲ್ಪಸಂಖ್ಯಾತ ಘಟಕದ ಜಿಲ್ಲಾ ಅಧ್ಯಕ್ಷ ಸಯ್ಯದ್ ಮೆಹಬೂಬ್, ಬಿಜೆಪಿ ತಾಲ್ಲೂಕು ಅಧ್ಯಕ್ಷ ಸತೀಶ್, ನಗರದ ಘಟಕದ ಅಧ್ಯಕ್ಷ ಸಿ. ಜಯರಾಜ್, ಬಿಎಂಆರ್‌ಡಿ ಅಧ್ಯಕ್ಷ ಸಿ. ನಾಗರಾಜ್, ನಗರಸಭೆ ಅಧ್ಯಕ್ಷ ಅರುಣ್ ಕುಮಾರ್‌, ಸದಸ್ಯರಾದ ರೋಷನ್, ಗುಲ್ಜಾರ್‌, ಟೌನ್ ಬ್ಯಾಂಕ್ ನಿರ್ದೇಶಕ ಎ.ಅಪ್ಸರ್‌, ಮುಖಂಡರಾದ ಶೌರತ್, ಶಿಜರ್‌ ಅಹಮದ್ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.