ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

3 ಕೆ.ಜಿ ಚಿನ್ನ ವಶ ಮೂವರ ಬಂಧನ

Last Updated 25 ನವೆಂಬರ್ 2022, 4:12 IST
ಅಕ್ಷರ ಗಾತ್ರ

ದೇವನಹಳ್ಳಿ: ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಎರಡು ಪ್ರತ್ಯೇಕ ಪ್ರಕರಣದಲ್ಲಿ ಅಕ್ರಮವಾಗಿ ಸುಮಾರು 3 ಕೆ.ಜಿ ಚಿನ್ನ ಸಾಗಣೆ ಮಾಡುತ್ತಿದ್ದ ಮೂವರು ಪ್ರಯಾಣಿಕರನ್ನು ಬಂಧಿಸಿ, ಅವರಿಂದ ಚಿನ್ನ ವಶಪಡಿಸಿಕೊಳ್ಳುವಲ್ಲಿ ಬೆಂಗಳೂರು ಕಸ್ಟಮ್ಸ್‌ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.‌

ಪೇಸ್ಟ್‌ ರೂಪಕ್ಕೆಚಿನ್ನ ಮಾರ್ಪಾಡು ಮಾಡಿ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಅಧಿಕಾರಿಗಳು ಆತನಿಂದ 823 ಗ್ರಾಂ ಚಿನ್ನ ವಶಕ್ಕೆ ಪಡೆದಿದ್ದಾರೆ. ಇದರ ಮೌಲ್ಯ ₹ 37.03 ಲಕ್ಷ ಎಂದು ಅಂದಾಜಿಸಲಾಗಿದೆ.

ಮತ್ತೊಂದು ಪ್ರಕರಣದಲ್ಲಿ ಒಟ್ಟು 2.3 ಕೆಜಿ ತೂಕದ 15 ಚಿನ್ನದ ಬಿಸ್ಕೆಟ್‌ ಹಾಗೂ ಎರಡು ಚಿನ್ನದ ಕಡ್ಡಿಯನ್ನು ಕಳ್ಳಸಾಗಣೆ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆಇಬ್ಬರು ಪ್ರಯಾಣಿಕರನ್ನು ಬಂಧಿಸಿ ಚಿನ್ನ ವಶಕ್ಕೆ ಪಡೆಯಲಾಗಿದೆ. ಇದರ ಒಟ್ಟು ಮೌಲ್ಯ ₹ 1.7 ಕೋಟಿ ಎಂದು ಅಂದಾಜಿಸಲಾಗಿದೆ.

ಬಂಧಿತರನ್ನು ನ್ಯಾಯಾಂಗ ವಶಕ್ಕೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT