ಭಾನುವಾರ, ಏಪ್ರಿಲ್ 11, 2021
29 °C

ದಲಿತ ಮುಖಂಡನ ಮೇಲೆ ಹಲ್ಲೆ ಪ್ರಕರಣ: ವ್ಯಕ್ತಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಚನ್ನರಾಯಪಟ್ಟಣ ಹೋಬಳಿ ಚೀಮಾಚನಹಳ್ಳಿಯಲ್ಲಿ ಶುಕ್ರವಾರ ಭೂ ವಿವಾದಕ್ಕೆ ಸಂಬಂಧಿಸಿದಂತೆ ದಲಿತ ಮುಖಂಡನನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಎರಡನೇ ಆರೋಪಿ ಬೈರೇಗೌಡ ಅವರನ್ನು ಬಂಧಿಸಲಾಗಿದೆ.

ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಸಬ್‌ ಇನ್‌ಸ್ಪೆಕ್ಟರ್ ನಂದೀಶ್ ತಿಳಿಸಿದರು.

ಮುಖಂಡ ನಾರಾಯಣಸ್ವಾಮಿ ಅವರನ್ನು ಮರಕ್ಕೆ ಕಟ್ಟಿ ಹಾಕಿದ ಸವರ್ಣೀಯರು ಹಲ್ಲೆ ಮಾಡಿದ್ದರೆಂದು ಆರೋಪಿಸಿ ಚನ್ನರಾಯಪಟ್ಟಣ ಪೊಲೀಸ್ ಠಾಣೆ‍ಗೆ ದೂರು ಕೊಡಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಷ್ಣಪ್ಪ, ಸುಶೀಲಮ್ಮ, ಚಂದ್ರ, ನಾರಾಯಣಸ್ವಾಮಿ, ನಂಜಪ್ಪ, ಪಾರ್ವತಮ್ಮ, ಪದ್ಮಾವತಿ, ಲೋಕೇಶ್ ಸೇರಿ ಒಟ್ಟು 9 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.