ಮಂಗಳವಾರ, ಮಾರ್ಚ್ 9, 2021
28 °C

ನಿರ್ವಾಹಕನ ಮೇಲೆ ಹಲ್ಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೊಡ್ಡಬಳ್ಳಾಪುರ: ಲಗೇಜಿಗೆ ಟಿಕೆಟ್ ನೀಡುವ ವಿಚಾರವಾಗಿ ಸಾರಿಗೆ ಸಂಸ್ಥೆ ಬಸ್ ನಿರ್ವಾಹಕನ ಮೇಲೆ ಪ್ರಯಾಣಿಕರು ಹಲ್ಲೆ ನಡೆಸಿದ್ದು, ಗಾಯಗೊಂಡಿರುವ ನಿರ್ವಾಹಕ ಆಸ್ಪತ್ರೆಗೆ ದಾಖಲಾಗಿದ್ದಾರೆ.

ನಗರದ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಬೆಂಗಳೂರಿಗೆ ಹೊರಟಿದ್ದ ಬಸ್‍ನಲ್ಲಿ ಪ್ರಯಾಣಿಸಲು ಕುಟುಂಬವೊಂದು ಲಗೇಜಿಗೆ ₹30 ಬದಲು ₹20 ಪಡೆಯುವಂತೆ ನಿರ್ವಾಹಕನೊಂದಿಗೆ ಜಗಳ ಮಾಡಿಕೊಂಡಿದ್ದಾರೆ.

ಈ ವೇಳೆ ನಿರ್ವಾಹಕ ಮಾರುತಿ ಎಂಬುವವರ ಮೇಲೆ ಪ್ರಯಾಣಿಕರ ಕುಟುಂಬದ ಸದಸ್ಯರು ಹಲ್ಲೆ ನಡೆಸಿದ್ದಾರೆ. ನೆರವಿಗೆ ಬಂದ ಚಾಲಕ ಶರಣಪ್ಪರ ಮೇಲೂ ಹಲ್ಲೆ ನಡೆದಿದೆ.

ಗಾಯಗೊಂಡ ನಿರ್ವಾಹಕ ಮಾರುತಿ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆಗೆ ಕಾರಣವಾಗಿರುವ ಶಬೀರ್ ಮತ್ತಿತರರ ಮೇಲೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಗೆ ದೂರನ್ನು ನೀಡಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು