ಮಂಗಳವಾರ, ಏಪ್ರಿಲ್ 7, 2020
19 °C

ಬುದ್ದಿ ಹೇಳಿದ ಪೊಲೀಸರ ಮೇಲೆ ಹಲ್ಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೊಡ್ಡಬಳ್ಳಾಪುರ: ಪಾಲನಜೋಗಳಹಳ್ಳಿ ಸಮೀಪದ ಟಿಪ್ಪುನಗರದಲ್ಲಿ ಅಂಗಡಿ ಮುಂದೆ ಕುಳಿತು ಹರಟೆ ಹೊಡೆಯುತ್ತಿದ್ದವರನ್ನು ಮನೆಗೆ ಹೋಗುವಂತೆ ಬುದ್ದಿ ಹೇಳಿದ ಎಎಸ್‌ಐ ರಾಮಯ್ಯ, ಕಾನ್‌ಸ್ಟೇಬಲ್‌ ಗಂಗಯ್ಯ ಅವರ ಮೇಲೆ ಹಲ್ಲೆ ಮಾಡಿರುವ ಘಟನೆ ಗುರುವಾರ ನಡೆದಿದೆ.

ಹಲ್ಲೆಯಿಂದ ಗಾಯಗೊಂಡಿರುವ ಪೊಲೀಸ್‌ ಸಿಬ್ಬಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಮವಸ್ತ್ರದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯ ಮೇಲೆಯೇ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಕುರಿತು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಹಲ್ಲೆಗೆ ಒಳಗಾಗಿರುವ ಪೊಲೀಸ್‌ ಸಿಬ್ಬಂದಿ ನೀಡಿರುವ ದೂರಿನಂತೆ ಏಜಾಜ್‌, ಶಾಹೀದ್‌, ಅಕ್ಬರ್‌, ಮುಬಾರಕ್‌ ಹಾಗೂ ಇತರರ ವಿರುದ್ದ ಪ್ರಕರಣ ದಾಖಲಾಗಿದೆ. ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)