ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಬ್ ಇನ್‌ಸ್ಪೆಕ್ಟರ್ ಮೇಲೆ ಹಲ್ಲೆ: ವ್ಯಕ್ತಿ ಬಂಧನ

Published 21 ಮೇ 2024, 15:46 IST
Last Updated 21 ಮೇ 2024, 15:46 IST
ಅಕ್ಷರ ಗಾತ್ರ

ಆನೇಕಲ್: ತಾಲ್ಲೂಕಿನ ಚಂದಾಪುರದಲ್ಲಿ ಸಂತೆಯಲ್ಲಿ ತರಕಾರಿ ಅಂಗಡಿ ಇಡುವ ಸಂಬಂಧ ಮಹಿಳೆಯೊಬ್ಬರ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದ ವ್ಯಕ್ತಿಯೊಬ್ಬರನ್ನು ತಡೆಯಲು ಹೋದ ಪೊಲೀಸ್‌ ಸಬ್‌ಇನ್‌ಸ್ಪೆಕ್ಟರ್‌ ಮೇಲೆಯೇ ಹಲ್ಲೆ ಮಾಡಿದ ಘಟನೆ ಸೋಮವಾರ ನಡೆದಿದೆ.

ಹಲ್ಲೆ ಮಾಡಿದ ವ್ಯಕ್ತಿ ಶಿವಕುಮಾರ್‌ (45) ಎಂಬಾತನನ್ನು ಚಂದಾಪುರ ಪೊಲೀಸರು ಬಂಧಿಸಿದ್ದಾರೆ.

ಸೋಮವಾರ ರಾತ್ರಿ ಚಂದಾಪುರ ಸಂತೆ ಮೈದಾನದಲ್ಲಿ ಅಂಗಡಿ ಇಡುವ ಸಂಬಂಧ ರಾಜಮ್ಮ ಮತ್ತು ಮೈನಾವತಿ ಅವರಿಗೆ ಜಗಳವಾಗಿತ್ತು. ಈ ಸಂದರ್ಭದಲ್ಲಿ ಮೈನಾವತಿಯ ಗಂಡ ಶಿವಕುಮಾರ್ ಮಚ್ಚು ಹಿಡಿದು ರಾಜಮ್ಮನ ಮೇಲೆ ಹಲ್ಲೆ ನಡೆಸಿ ಎಳೆದಾಡಿದ್ದ ಎನ್ನಲಾಗಿದೆ.

ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಪಿಎಸ್‌ಐ ಚಿಕ್ಕನರಸಿಂಹಯ್ಯ ಮಧ್ಯಪ್ರವೇಶಿಸಿ ಶಿವಕುಮಾರ್‌ಗೆ ಎಚ್ಚರಿಕೆ ನೀಡಿ ವೃದ್ಧೆಯ ಮೇಲೆ ಹಲ್ಲೆ ಮಾಡುತ್ತಿರುವುದು ಸರಿಯಲ್ಲ ಎಂದು ಬುದ್ದಿವಾದ ಹೇಳಿದ್ದಾರೆ. ಕುಪಿತನಾದ ಶಿವಕುಮಾರ್‌ ಪೊಲೀಸರನ್ನು ಸಹ ಅವಾಚ್ಯ ಶಬ್ಧಗಲಿಂದ ನಿಂದಿಸಿ ಹಲ್ಲೆ ಮಾಡಿದ್ದಾನೆ. ಸರ್ಕಾರಿ ಕೆಲಸಕ್ಕೆ ಅಡ್ಡಿ ಪಡಿಸಿದ ಮತ್ತು ಪೊಲೀಸರ ಮೇಲೆ ನಡೆಸಿದ ಆರೋಪದ ಮೇಲೆ ಸೂರ್ಯಸಿಟಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಶಿವಕುಮಾರ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT