ದೇಶಕ್ಕೆ ಮಾದರಿಯಾದ ಯೋಜನೆ

7
ವಿಮಾನ ನಿಲ್ದಾಣದಲ್ಲಿ ಶೀಘ್ರ ಇಂದಿರಾ ಕ್ಯಾಂಟೀನ್ ಆರಂಭ: ಸಂಸದ

ದೇಶಕ್ಕೆ ಮಾದರಿಯಾದ ಯೋಜನೆ

Published:
Updated:
Prajavani

ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶೀಘ್ರ ಇಂದಿರಾ ಕ್ಯಾಂಟೀನ್ ಆರಂಭಕ್ಕೆ ಕಾಮಗಾರಿ ನಡೆಯಲಿದೆ ಎಂದು ಸಂಸದ ಎಂ.ವೀರಪ್ಪ ಮೊಯಿಲಿ ತಿಳಿಸಿದರು.

ಇಲ್ಲಿನ ಹಳೇ ಬಸ್ ನಿಲ್ದಾಣದಲ್ಲಿ ನೂತನ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ ಮಾತನಾಡಿದರು. ಇಂದಿರಾ ಕ್ಯಾಂಟೀನ್ ಸರ್ಕಾರದ ‌ಯೋಜನೆ. ಹಸಿದ ಬಡ ವರ್ಗದವರಿಗೆ ಕಡಿಮೆ ದರದಲ್ಲಿ ಉಪಹಾರ, ಊಟ ನೀಡುವ ಯೋಜನೆ ದೇಶಕ್ಕೆ ಮಾದರಿಯಾಗಿದೆ. ಆನೇಕ ರಾಜ್ಯಗಳು ಈ ಯೋಜನೆ ಬಗ್ಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿ ಮಾಹಿತಿ ಪಡೆಯುತ್ತಿದ್ದಾರೆ ಎಂದು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ ಮಾತನಾಡಿ, ಸರ್ಕಾರ ಉತ್ತಮ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಸ್ಥಳೀಯರು ಸದುಪಯೋಗಪಡೆಯಬೇಕು. ಇಂದಿರಾ ಕ್ಯಾಂಟೀನ್‌ನಲ್ಲಿ ಸ್ವಚ್ಛತೆ ಮತ್ತು ಗುಣಮಟ್ಟಕ್ಕೆ ಅದ್ಯತೆ ನೀಡಬೇಕು ಎಂದು ಈಗಾಗಲೇ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಪುರಸಭೆ ಅಧ್ಯಕ್ಷ ಎಂ.ಮೂರ್ತಿ ಮಾತನಾಡಿ, ಜಿಲ್ಲಾಡಳಿತ ಮತ್ತು ಪುರಸಭೆ ಸಹಭಾಗಿತ್ವದಲ್ಲಿ ₹92 ಲಕ್ಷ ವೆಚ್ಚದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡಲಾಗಿದೆ. ಬೆಳಿಗ್ಗೆ ಉಪಹಾರ, ಮಧ್ಯಾಹ್ನ ಹಾಗೂ ರಾತ್ರಿ ಊಟದ ವ್ಯವಸ್ಥೆ ಇರಲಿದೆ ಎಂದು ಹೇಳಿದರು.

ಶಾಸಕ ನಿಸರ್ಗ ನಾರಾಯಣಸ್ವಾಮಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜಯಮ್ಮ ,ಉಪಾಧ್ಯಕ್ಷೆ ಕನ್ಯಾಕುಮಾರಿ, ಜಿಲ್ಲಾ ಪಂಚಾಯಿತಿ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷೆ ರಾಧಮ್ಮ ಮುನಿರಾಜು, ಜಿಲ್ಲಾ ಪಂಚಾಯಿತಿ ಸದಸ್ಯರಾದ ಲಕ್ಷ್ಮಿನಾರಾಯಣ,ಕೆ.ಸಿ ಮಂಜುನಾಥ್, ಅನಂತಕುಮಾರಿ, ಪುರಸಭೆ ಉಪಾಧ್ಯಕ್ಷೆ ಅಶಾರಾಣಿ, ಸ್ಥಾಯಿ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ, ಸದಸ್ಯರಾದ ರವೀಂದ್ರ, ವೈ.ಸಿಸತೀಶ್, ಪದ್ಮಾವತಿ, ರತ್ನಮ್ಮ, ಲಕ್ಷ್ಮಿವೆಂಕಟೇಶ್, ಗಾಯಿತ್ರಿ, ಪುಪ್ಪ ರವಿಕುಮಾರ್,ಶಾಂತಮ್ಮ ,ಗೋಪಾಲ್, ಶಾರದಮ್ಮ,ಎಂ.ಕುಮಾರ್, ಬೇಕರಿ ಮಂಜುನಾಥ್, ಎಂ.ನಾರಾಯನಸ್ವಾಮಿ, ನರಸಿಂಹಮೂರ್ತಿ, ಎನ್.ರಘು, ಜಿ.ಎನ್.ವೇಣು ಗೋಪಾಲ್, ಶಶಿಕುಮಾರ್, ಮುಖ್ಯಾಧಿಕಾರಿ ಹನುಮಂತೇಗೌಡ, ಕೆಪಿಸಿಸಿ ಸದಸ್ಯ ಚಿನ್ನಪ್ಪ, ಕೆಪಿಸಿಸಿ ಹಿಂದುಳಿದ ವರ್ಗ ರಾಜ್ಯ ಘಟಕ ಉಪಾಧ್ಯಕ್ಷ ಸಿ.ಜಗನ್ನಾಥ್, ಕಾರ್ಯದರ್ಶಿ ಆರ್.ರವಿಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕುಮಾರ್, ವಿಜಯಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಮಚಂದ್ರಪ್ಪ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !