ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅತ್ಯಾಧುನಿಕ ಅಗ್ನಿಶಾಮಕ ಯಂತ್ರ

Last Updated 23 ನವೆಂಬರ್ 2021, 1:22 IST
ಅಕ್ಷರ ಗಾತ್ರ

ದೇವನಹಳ್ಳಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಂಭವಿಸುವ ಬೆಂಕಿ ದುರಂತಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸಲು ಮೊದಲ ಬಾರಿಗೆ ‘ರೋಸೆನ್‌ ಬೌರ್ ಫೈರ್‌ ಫೈಟಿಂಗ್ ಸಿಮ್ಯುಲೇಟರ್’ ಅಳವಡಿಸಲಾಗಿದೆ.

ಇದು ದಕ್ಷಿಣ ಏಷ್ಯಾದಲ್ಲೇ ಮೊದಲ ಬಾರಿಗೆ ಪರಿಚಯಿಸಿದ ಅತ್ಯಾಧುನಿಕ ಅಗ್ನಿಶಾಮಕ ತಂತ್ರಜ್ಞಾನವಾಗಿದೆ.ವಿಮಾನ ನಿಲ್ದಾಣ ಅಥವಾ ವಿಮಾನ ಅಪಘಾತದ ಸಂದರ್ಭದಲ್ಲಿ ಹೊತ್ತಿಕೊಳ್ಳುವ ಬೆಂಕಿಯನ್ನು ತುರ್ತಾಗಿ ಆರಿಸುವಲ್ಲಿ ಈ ಅತ್ಯಾಧುನಿಕ ಸಿಮ್ಯುಲೇಟರ್ ಕೆಲಸ ಮಾಡಲಿದೆ.

ರೋಸೆನ್‌ಬೌರ್ ಸಿಮ್ಯುಲೇಟರ್‌ನಲ್ಲಿ ಎರಡು ಫ್ಯಾಂಥರ್, 6 ಟ್ರಕ್‌ ಹಾಗೂ 8 ಟ್ರಕ್‌ ಇರಿಸಲಾಗಿದೆ. ಈ ಟ್ರಕ್‌ಗಳು ಎರಡು ಹೈರೀಚ್ ಎಕ್ಸ್ಟೆಂಡೆಬಲ್ ಟರೆಟ್ಸ್ (ಎಚ್‌ಆರ್‌ಇಟಿ) ಒಳಗೊಂಡಿದ್ದು, ಈ ಮಟ್ಟದ ಸುಸಜ್ಜಿತ ಟ್ರಕ್‌ಗಳು ದಕ್ಷಿಣ ಏಷ್ಯಾದಲ್ಲಿಯೇ ಯಾವ ವಿಮಾನ ನಿಲ್ದಾಣಗಳಲ್ಲೂ ಇಲ್ಲಎಂದು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಜಯರಾಜ್ ಷಣ್ಮುಗಂ ತಿಳಿಸಿದ್ದಾರೆ.

‘ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸುರಕ್ಷತೆ ಕಾಯ್ದುಕೊಳ್ಳುವುದು ನಮ್ಮ ಮೊದಲ ಆದ್ಯತೆ. ವಿಮಾನ ನಿಲ್ದಾಣದಲ್ಲಿರುವ ಅಗ್ನಿಶಾಮಕ ದಳದವರಿಗೆ ಈ ಸಿಮ್ಯುಲೇಟರ್‌ ಬಳಸುವ ವಿಧಾನದ ಬಗ್ಗೆ ತರಬೇತಿ ನೀಡಲಾಗಿದೆ. ದೇಶದ ಯಾವುದೇ ವಿಮಾನ ನಿಲ್ದಾಣದ ತಂಡ ಇಲ್ಲಿಗೆ ಬಂದುಈ ಅಗ್ನಿಶಾಮಕ ಯಂತ್ರದ ತರಬೇತಿ ಪಡೆಯಲು ಮುಕ್ತ ಅವಕಾಶ ಕಲ್ಪಿಸಲಾಗಿದೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT