ಗುರುವಾರ , ಡಿಸೆಂಬರ್ 8, 2022
18 °C

ಎಟಿಎಂನಲ್ಲಿ ಹಣ ದೋಚಲು ಯತ್ನ: ದೂರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೊಡ್ಡಬಳ್ಳಾಪುರ: ತಾಲ್ಲೂಕಿನ ಮೆಳೇಕೋಟೆ ಕ್ರಾಸ್ ಬಳಿಯಿರುವ ಎಟಿಎಂ ದೋಚುವ ವಿಫಲ ಯತ್ನ ಮಂಗಳವಾರ ತಡರಾತ್ರಿ ನಡೆದಿದೆ.

ಈ ಎಟಿಎಂನಲ್ಲಿ ಒಂದು ವರ್ಷದಲ್ಲಿ ಎರಡನೇ ಬಾರಿ ಕಳವು ಯತ್ನ ನಡೆದಿದೆ. ಕೇಂದ್ರದ ಹಿಂಭಾಗದ ಗೋಡೆ ಒಡೆದು ಒಳನುಗ್ಗಲು ಕಳ್ಳರು ಯತ್ನಿಸಿದ್ದಾರೆ. ಆದರೆ, ಗ್ರಾಮಸ್ಥರು ಗೋಡೆ ಒಡೆಯುವ ಸದ್ದಿಗೆ ಮನೆಯಿಂದ ಹೊರ ಬರುತ್ತಿದ್ದಂತೆ ಪರಾರಿಯಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಗ್ರಾಮಾಂತರ ಪೊಲೀಸ್‌ ಠಾಣೆ ಇನ್‌ಸ್ಪೆಕ್ಟರ್‌ ಮುನಿಕೃಷ್ಣ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು