ಶುಕ್ರವಾರ, ಮೇ 14, 2021
21 °C

ಕರ್ತವ್ಯಕ್ಕೆ ಹಾಜರು: ಪ್ರಶಂಸನಾ ಪತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೊಡ್ಡಬಳ್ಳಾಪುರ: ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರದ ನಡುವೆಯೂ ಸಾರಿಗೆ ಬಸ್‌ ಸಂಚಾರ ಹೆಚ್ಚುತ್ತಿದೆ. ಕರ್ತವ್ಯಕ್ಕೆ ಹಾಜರಾಗುವ ಸಿಬ್ಬಂದಿಯ ಸಂಖ್ಯೆಯಲ್ಲೂ ಏರಿಕೆ ಕಾಣುತ್ತಿದೆ.ದೊಡ್ಡಬಳ್ಳಾಪುರ ವಿಭಾಗದಲ್ಲಿ ಭಾನುವಾರ 33ಕ್ಕೂ ಹೆಚ್ಚು ಬಸ್‌ಗಳು ಸಂಚಾರ ನಡೆಸಿದವು.

ದೊಡ್ಡಬಳ್ಳಾಪುರ ವಿಭಾಗದ 358 ನೌಕರರಲ್ಲಿ ಶೇ 35ಕ್ಕೂ ಅಧಿಕ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿದ್ದರು. ಸೋಮವಾರ ಮತ್ತಷ್ಟು ಸಿಬ್ಬಂದಿ ಕೆಲಸಕ್ಕೆ ಬರುವ ನಿರೀಕ್ಷೆ ಇದ್ದು ಸಾರಿಗೆ ಸಂಚಾರದಲ್ಲಿ ಸುಧಾರಣೆ ಕಾಣುವ ಸಾಧ್ಯತೆ ಇದೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಭಾನುವಾರ ಬೆಳಿಗ್ಗೆ ಕೆಲ ಸಿಬ್ಬಂದಿ ಸ್ವಯಂ ಪ್ರೇರಿತರಾಗಿ ಕರ್ತವ್ಯಕ್ಕೆ ಹಾಜರಾದ ಚಾಲಕರು ಮತ್ತು ನಿರ್ವಾಹಕರಿಗೆ ವ್ಯವಸ್ಥಾಪಕ ಆನಂದ್ ಹಾಗೂ ಸಹಾಯಕ ಆಡಳಿತಾಧಿಕಾರಿ ಶಿವನಾರಾಯಣ್ ಪ್ರಶಂಸನ ಪತ್ರ ಹಾಗೂ ಸಿಹಿ ನೀಡಿ ಆಹ್ವಾನಿಸಿದರು. ಕೆಎಸ್‌ಆರ್‌ಟಿಸಿ ಬಸ್‌ಗಳು ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದರಿಂದ ಪ್ರಯಾಣಿಕರಲ್ಲಿ ಒಂದಿಷ್ಟು ಭರವಸೆ ಮೂಡಿತು. ರಸ್ತೆಯಲ್ಲಿಯೂ ಸಾರಿಗೆ ಬಸ್‌ ಸಂಚಾರ ಕಂಡುಬಂದವು.

ಭಾನುವಾರ ದೊಡ್ಡಬಳ್ಳಾಪುರದಿಂದ ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ, ದೇವನಹಳ್ಳಿ, ನೆಲಮಂಗಲ, ದಾಬಸ್ ಪೇಟೆ, ಗೌರಿಬಿದನೂರು ಮಾರ್ಗದಲ್ಲಿ ಬಸ್‌ಗಳು ಸಂಚರಿಸಿದವು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು