ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಟಾಕಿ ದುರಂತ: ಮೃತರ ಕುಟುಂಬಗಳಿಗೆ ತಲಾ ₹3 ಲಕ್ಷ ಪರಿಹಾರ ಘೋಷಿಸಿದ ತಮಿಳುನಾಡು

Published 8 ಅಕ್ಟೋಬರ್ 2023, 7:17 IST
Last Updated 8 ಅಕ್ಟೋಬರ್ 2023, 7:17 IST
ಅಕ್ಷರ ಗಾತ್ರ

ಆನೇಕಲ್: ತಾಲ್ಲೂಕಿನ ಅತ್ತಿಬೆಲೆಯಲ್ಲಿ ಸಂಭವಿಸಿದ ಪಟಾಕಿ ದುರಂತದಲ್ಲಿ ಮೃತಪಟ್ಟ 14 ಕೆಲಸಗಾರರು ತಮಿಳುನಾಡಿನ ಮೂಲದವರಾಗಿದ್ದು, ಅಲ್ಲಿನ ಸರ್ಕಾರ ಮೃತರ ಕುಟುಂಬಕ್ಕೆ ತಲಾ ₹3 ಲಕ್ಷ ಪರಿಹಾರ ಘೋಷಿಸಿದೆ.

ತಮಿಳುನಾಡಿನ ಆರೋಗ್ಯ, ಆಹಾರ ಸಚಿವರು ಮತ್ತು ಜನಪ್ರತಿನಿಧಿಗಳು ಅತ್ತಿಬೆಲೆ ಆಕ್ಸ್‌ಫರ್ಡ್ ಆಸ್ಪತ್ರೆಗೆ ಆಗಮಿಸುತ್ತಿದ್ದಾರೆ.

ಮೃತರ ಕುಟುಂಬಸ್ಥರು ಆಕ್ಸ್‌ಫರ್ಡ್ ಆಸ್ಪತ್ರೆ ಬಳಿ ಜಮಾಯಿಸಿದ್ದು, ಅವರ ಆಕ್ರಂದನ ಮುಗಿಲು ಮುಟ್ಟಿದೆ.

ಉದ್ಯೋಗ ನೀಡಲು ಆಗ್ರಹ: ಪ್ರತಿಭಟನೆ

ಆನೇಕಲ್: ಅತ್ತಿಬೆಲೆ ಪಟಾಕಿ ದುರಂತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಈಗ ಘೋಷಣೆ ಮಾಡಿರುವ ಪರಿಹಾರವನ್ನು ಹೆಚ್ಚಿಸಬೇಕೆಂದು ವಿಡುದಲೈ ಚಿರತೆಗಳ್ (ವಿಕೆಸಿ) ಪದಾಧಿಕಾರಿಗಳು ಸಂಘಟನೆ ಪದಾಧಿಕಾರಿಗಳು ಆಕ್ಸ್‌ಫರ್ಡ್ ಆಸ್ಪತ್ರೆಯ ಶವಗಾರದ ಮುಂದೆ ಭಾನುವಾರ ಪ್ರತಿಭಟನೆ ನಡೆಸಿದರು.

ಈಗಾಗಲೇ ಕರ್ನಾಟಕ ಸರ್ಕಾರ ಮೃತರ ಕುಟುಂಬಗಳಿಗೆ ತಲಾ ₹5 ಲಕ್ಷ ಹಾಗೂ ತಮಿಳುನಾಡು ಸರ್ಕಾರ ₹3 ಲಕ್ಷ ಪರಿಹಾರ ಘೋಷಣೆ ಮಾಡಿದೆ. ಇದು ಸಾಲದು. ಪರಿಹಾರ ಮೊತ್ತವನ್ನು ಹೆಚ್ಚಿಸಬೇಕು. ಎರಡೂ ರಾಜ್ಯದಿಂದ ಮೃತರ ಕುಟುಂಬಕ್ಕೆ ಸರ್ಕಾರಿ ಉದ್ಯೋಗ ನೀಡಬೇಕೆಂಬ ಪ್ರತಿಭಟನನಿರತರು ಆಗ್ರಹಿಸಿದರು.

ಅಲ್ಲದೆ ಕೇಂದ್ರ ಸರ್ಕಾರವು ₹1 ಕೋಟಿ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT