ಅತ್ತಿಬೆಲೆ (ಆನೇಕಲ್): ಪಟಾಲಮ್ಮ ದೇವಿ ಸೇವಾ ಸಮಿತಿಯಿಂದ ಅತ್ತಿಬೆಲೆಯ ಗ್ರಾಮ ದೇವತೆ ಪಟಾಲಮ್ಮ ದೇವಿ ದೇವಾಲಯ ಜೀರ್ಣೋದ್ಧಾರವಾಗಿ 50 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವ ನಡೆಯಿತು.

ಮೇ 25ರಿಂದಲೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಬುಧವಾರ ವಿವಿಧ ಪೂಜಾ ಕೈಂಕರ್ಯಗಳು ಜರುಗಿದವು. ಸರತಿ ಸಾಲಿನಲ್ಲಿ ನಿಂತು ಭಕ್ತರು ದೇವಿಯ ದರ್ಶನ ಪಡೆದರು. ಮಹಿಳೆಯರು ಭಕ್ತಿ ಗೀತಗೆಳ ಗಾಯನ, ಸಾಮೂಹಿಕ ಲಲಿತಾ ಸಹಸ್ರನಾಮ ಪಾರಾಯಣ ನಡೆಯಿತು.

ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ಶ್ರೀ ಶ್ರೀ ರವಿಶಂಕರ್ ಗುರೂಜಿ ಮಾತನಾಡಿ, ದೇವಾಲಯದಿಂದ ಸಮಾಜದಲ್ಲಿ ಸಾಮರಸ್ಯ ಹೆಚ್ಚಾಗುತ್ತದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿಪಾಲ್ಗೊಳ್ಳುವುದರಿಂದ ಶಾಂತಿ ನೆಮ್ಮದಿ ಮೂಡುವ ಜೊತೆಗೆ ಒಗ್ಗಟ್ಟು ಮೂಡುತ್ತದೆ. ಮೌಲ್ಯಾಧಾರಿಯ ಚಿಂತನೆಗಳನ್ನು ಬೆಳೆಸಲು ಧಾರ್ಮಿಕ ಕಾರ್ಯಕ್ರಮಗಳು ವೇದಿಕೆಯಾಗಬೇಕು ಎಂದರು.

ಜಯನಗರ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಕೆ.ರಾಮಮೂರ್ತಿ, ಪಟಾಲಮ್ಮ ದೇವಿ ಸೇವಾ ಸಮಿತಿ ಅಧ್ಯಕ್ಷ ಪಟಾಪಟ್ ಶ್ರೀನಿವಾಸ್, ನಿರ್ದೇಶಕರಾದ ಜಯಚಂದ್ರ, ವೆಂಕಟೇಶ್, ಮುನಿಯಪ್ಪ, ಮಂಜುನಾಥ್, ಕೃಷ್ಣಮೂರ್ತಿ, ಕೃಷ್ಣಪ್ಪ, ಎ.ಆರ್.ಪ್ರಕಾಶ್, ರಘುನಾಥ್, ಶ್ರೀನಿವಾಸ್, ಲೋಕೇಶ್, ಉಮೇಶ್, ನರಸಿಂಹಮೂರ್ತಿ, ಮೋಹನ್ ಬಾಬು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-15-471945533

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.