ಆವತಿ (ದೇವನಹಳ್ಳಿ): ತಾಲ್ಲೂಕಿನ ಆವತಿ ಗ್ರಾಮದಲ್ಲಿ ಒಕ್ಕಲಿಗ ಸಮುದಾಯದಿಂದ ಬಂಡಿ ದೇವರ ಕರಗ ಮಹೋತ್ಸವ ಹಾಗೂ ಹೂ ಮುಡಿಸುವ ಕರ್ಣಭೂಷಣ ಮಹೋತ್ಸವವನ್ನು ಈಚೆಗೆ ವಿಜೃಂಭಣೆಯಿಂದ ಆಚರಿಸಲಾಯಿತು.

ಒಕ್ಕಲಿಗ ಸಮುದಾಯದಲ್ಲಿ ಪರಂಪರೆಯಿಂದ ನಡೆದು ಬರುತ್ತಿರುವ ಮಹೋತ್ಸವವನ್ನು 13ರಿಂದ 25 ವರ್ಷಗಳಿಗೊಮ್ಮೆ ಆಚರಿಸುವ ಸಂಪ್ರದಾಯವಿದೆ. ಗ್ರಾಮ ದೇವತೆಯ ಆರಾಧನೆಯ ಅಂಗವಾಗಿ ದೇವರ ಉತ್ಸವ ಮೂರ್ತಿಯನ್ನು ಅಲಂಕೃತ ಬಂಡಿಯಲ್ಲಿ ಮೆರವಣಿಗೆ ನಡೆಸಿ, ಶಕ್ತಿ ದೇವತೆಯ ಸಂಕೇತವಾದ ಹೂವಿನ ಕಳಸವನ್ನು ತಲೆಯ ಮೇಲೆ ಹೊತ್ತು ಭಕ್ತರು ಸಂಭ್ರಮದಿಂದ ಭಾಗವಹಿಸಿದರು.

ಗ್ರಾಮದ ಸುಮಾರು 50 ಗೌಡರ ಕುಟುಂಬಗಳ ಸಹಭಾಗಿತ್ವದಲ್ಲಿ ಮಹೋತ್ಸವ ನೆರವೇರಿತು. ಸಾವಿರಾರು ಭಕ್ತರು ಪಾಲ್ಗೊಂಡು ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗಿಯಾದರು.

ಜಿಲ್ಲಾ ಸಹಕಾರಿ ಒಕ್ಕೂಟದ ಮಾಜಿ ಅಧ್ಯಕ್ಷ ಎ.ಸಿ. ನಾಗರಾಜ್ ಮಾತನಾಡಿ, ‘ಸುಮಾರು 13ರಿಂದ 15 ವರ್ಷಗಳ ಬಳಿಕ ಆವತಿ ಗ್ರಾಮದಲ್ಲಿ ಕರಗ ಮಹೋತ್ಸವ ಆಚರಿಸಲಾಗುತ್ತಿದೆ. ಎರಡು ಸಾವಿರಕ್ಕೂ ಹೆಚ್ಚು ಭಕ್ತರು ಪಾಲ್ಗೊಂಡಿರುವುದು ಸಂತಸದ ಸಂಗತಿ’ ಎಂದರು.

ತಾಲೂಕು ಸೊಸೈಟಿ ನಿರ್ದೇಶಕ ಮಂಜುನಾಥ್ ಮಾತನಾಡಿ, ‘ಹಿರಿಯರು ನಡೆಸಿಕೊಂಡು ಬಂದ ಸಂಪ್ರದಾಯವನ್ನು ಮುಂದುವರಿಸಿಕೊಂಡು ಹೋಗುತ್ತಿರುವುದು ಹೆಮ್ಮೆಯ ವಿಚಾರ’ ಎಂದು ಹೇಳಿದರು.

ಮಾಜಿ ಶಾಸಕ ಎನ್. ನಾರಾಯಣಸ್ವಾಮಿ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕೊಡುಗುರ್ಕಿ ಕೆ.ವಿ. ಮಂಜುನಾಥ್, ಬಯಾಪ ಅಧ್ಯಕ್ಷ ವಿ. ಶಾಂತಕುಮಾರ್, ನಿರ್ದೇಶಕ ಸಿ. ಪ್ರಸನ್ನ ಕುಮಾರ್, ಕರವೇ ಅಧ್ಯಕ್ಷ ಬಾಬು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-15-316315881

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.