ದೇವನಹಳ್ಳಿ: ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯ ಜಿಲ್ಲೆಯಲ್ಲಿ ಶೇಕಡ 79.19ರಷ್ಟು ಪೂರ್ಣಗೊಂಡಿದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ನಿಗದಿತ ಅವಧಿಯೊಳಗೆ ಜಿಲ್ಲೆಯಲ್ಲಿ ಶೇಕಡ 100ರಷ್ಟು ಸಮೀಕ್ಷೆ ಕಾರ್ಯ ಪೂರ್ಣಗೊಳಿಸಲಾಗುವುದು ಎಂದರು.

ಸಮೀಕ್ಷೆ ಕಾರ್ಯ ಸಮರ್ಪಕವಾಗಿ ಪೂರ್ಣಗೊಳ್ಳಲು ಹಾಗೂ ಯಾರೊಬ್ಬರೂ ಕೂಡ ಸಮೀಕ್ಷೆಯಿಂದ ಹೊರಗುಳಿಯಬಾರದು ಎಂಬ ಉದ್ದೇಶದಿಂದ ಸಮೀಕ್ಷೆ ಅವಧಿಯನ್ನು ಅ.18 ರವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಒಟ್ಟು 3,85,237 ಕಟುಂಬಗಳ ಪೈಕಿ 2,65,119 ಕುಟುಂಬ ಹಾಗೂ 12,26,357 ಜನಸಂಖ್ಯೆ ಪೈಕಿ 9,03,742 ಜನರ ಸಮೀಕ್ಷೆ (ಶೇಕಡ 79.19) ಸಮೀಕ್ಷೆ ಪೂರ್ಣಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸಮೀಕ್ಷೆಗೆ ಸಹಕರಿಸಿ: ದತ್ತಾಂಶ ಸಂಗ್ರಹಣೆ ರಾಜ್ಯದ ಅಭಿವೃದ್ಧಿಗೆ ಮತ್ತು ಸಮಾಜದ ಎಲ್ಲಾ ವರ್ಗಗಳಿಗೆ ಸಮಾನ ಅವಕಾಶ ಒದಗಿಸುವ ಉದ್ದೇಶವಾಗಿದೆ. ಸಾರ್ವಜನಿಕರು ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ. ಸಮೀಕ್ಷೆಯ ದತ್ತಾಂಶ ಗೌಪ್ಯತೆ ಕಾಪಾಡಲಿದೆ. ಜೊತೆಗೆ ದತ್ತಾಂಶವು ಸೋರಿಕೆ ಆಗುವುದಿಲ್ಲ. ಸಾರ್ವಜನಿಕರು ನಿರ್ಭಿತಿಯಿಂದ ಸಮೀಕ್ಷೆಗೆ ಸಹಕರಿಸಿ ಗಣತೀದಾರರಿಗೆ ಮಾಹಿತಿ ನೀಡಿ ಎಂದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಯಶ್ರೀ ಹೆಂಡೇಗಾರ್, ಜಿಲ್ಲಾ ಸಾಂಖ್ಯಿಕ ಅಧಿಕಾರಿ ಲಕ್ಷ್ಮಿಕಾಂತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕ ಅಶೋಕ್ ಕುಮಾರ್ ಡಿ. ಉಪಸ್ಥಿತರಿದ್ದರು.

ಮನೆಬಾಗಿಲಿಗೆ ಬರಲಿದ್ದಾರೆ ಗಣತಿದಾರರು

ಜಿಲ್ಲೆಯಲ್ಲಿ ಒಟ್ಟು ಐದು ಸಹಾಯವಾಣಿ ಕೇಂದ್ರ ತೆರೆಯಲಾಗಿದ್ದು ಬೆಳಗ್ಗೆ 7ರಿಂದ ಸಂಜೆ 7ರವರೆಗೆ ಸಾರ್ವಜನಿಕರು ಸಂಪರ್ಕಿಸಬಹುದು. ಸಮೀಕ್ಷೆಯಲ್ಲಿ ಬಿಟ್ಟು ಹೋದ ಕುಟುಂಬ ಭಾಗವಹಿಸದೆ ಇರುವವರು ಸಹಾಯವಾಣಿ ಸಂಪರ್ಕಿಸಿದರೆ ಗಣತಿದಾರರು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಮಾಡಲಿದ್ದಾರೆ.

ಜಿಲ್ಲಾ ಹಿಂದುಳಿದ ವರ್ಗಗಳ ಕಚೇರಿ: 080-22449999 ದೇವನಹಳ್ಳಿ: 9036858653 ದೊಡ್ಡಬಳ್ಳಾಪುರ: 8884579990 ಹೊಸಕೋಟೆ: 080-27931104 ನೆಲಮಂಗಲ: 9740100884

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.