ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವನಹಳ್ಳಿ: ದುಸ್ಥಿತಿಯಲ್ಲಿ ಬಸ್‌ ನಿಲ್ದಾಣಗಳು

ನಿರ್ವಹಣೆ ಇಲ್ಲದೆ ಹದಗೆಟ್ಟ ಸಂಸದರ ಯೋಜನೆಯಡಿ ನಿರ್ಮಿಸಿದ ತಂಗುದಾಣ
Published 17 ಫೆಬ್ರುವರಿ 2024, 13:21 IST
Last Updated 17 ಫೆಬ್ರುವರಿ 2024, 13:21 IST
ಅಕ್ಷರ ಗಾತ್ರ

ವಿಜಯಪುರ(ದೇವನಹಳ್ಳಿ): ಪಟ್ಟಣ ಸೇರಿದಂತೆ ಹೊರವಲಯದಲ್ಲಿ ಸಂಸದರ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ನಿರ್ಮಿಸಿದ್ದ ಬಸ್ ತಂಗುದಾಣಗಳು ನಿರ್ವಹಣೆ‌ ಇಲ್ಲದೆ ದುಸ್ಥಿತಿ ತಲುಪಿದೆ.

ಪ್ರಯಾಣಿಕರು ಅದರಲ್ಲಿ ಕೆಳಗೆ ನಿಂತುಕೊಳ್ಳಲು ಹಾಗೂ ಕುಳಿತುಕೊಳ್ಳಲು ಭಯಪಡುವಂತಾಗಿದೆ.

ಪಟ್ಟಣದ ಶಿಡ್ಲಘಟ್ಟ ಕ್ರಾಸ್, ಟೋಲ್ ಗೇಟ್ ಬಳಿ, ಚಂದೇನಹಳ್ಳಿ ಗೇಟ್ ಚನ್ನರಾಯಪಟ್ಟಣ ಸರ್ಕಲ್ ಬಳಿ, ಹೊರವಲಯದ ಭಟ್ರೇನಹಳ್ಳಿ ಗೇಟ್, ಕೋರಮಂಗಲ ಗೇಟ್ ಸೇರಿದಂತೆ ಬಹುತೇಕ ಕಡೆಗಳಲ್ಲಿ ನಿರ್ಮಿಸಲಾಗಿದ್ದ ತಂಗುದಾಣಗಳ ಆಸನಗಳು ಕಿತ್ತುಹೋಗಿವೆ. ಪ್ರಯಾಣಿಕರು ಕುಳಿತುಕೊಳ್ಳಲು ಸಾಧ್ಯವಿಲ್ಲದಷ್ಟು ಹಾಳಾಗಿವೆ.

ಶಾಲಾ–ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ರಸ್ತೆಯ ಇಕ್ಕೆಲುಗಳಲ್ಲಿರುವ ಮರಗಳ ಕೆಳಗೆ ನಿಂತು ಬಸ್ಸಿಗಾಗಿ ಕಾಯುವಂತಹ ಸ್ಥಿತಿ ನಿರ್ಮಾಣವಾಗಿದೆ. ಮಳೆ ಬಂದರೆ ಸಮೀಪದ ಅಂಗಡಿ ಮುಂಗಟ್ಟುಗಳ ಬಳಿ ಆಶ್ರಯ ಪಡೆಯಬೇಕಾಗಿದೆ.

ತಂಗುದಾಣ ಮದ್ಯ ವ್ಯಸನಿಗಳ ತಾಣವಾಗಿದೆ. ಇದರಿಂದ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು ಮುಜುಗರಕ್ಕೆ ಒಳಗಾಗುವಂತಾಗಿದೆ.

ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ, ಈ ತಂಗುದಾಣ ಪ್ರಯಾಣಿಕರಿಗೆ ಉಪಯೋಗವಾಗುವಂತೆ ಸರಿಪಡಿಸಬೇಕಾಗಿದೆ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT