ಶುಕ್ರವಾರ, ಅಕ್ಟೋಬರ್ 30, 2020
19 °C

ಬಾಂಬೆ ಸಲೀಂನಿಂದ ಮೋಸ: ದೂರು ನೀಡಲು ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೊಡ್ಡಬಳ್ಳಾಪುರ: ಹಣ ಸುಲಿಗೆ, ಜೀವ ಬೆದರಿಕೆ, ಕೊಲೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಬಾಗೇಪಲ್ಲಿ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದ ಬಾಂಬೆ ಸಲೀಂ ಎಂಬಾತನನ್ನು ಹೆಚ್ಚಿನ ವಿಚಾರಣೆಗಾಗಿ ದೊಡ್ಡಬಳ್ಳಾಪುರದ ಪೊಲೀಸರ‌ ವಶಕ್ಕೆ ಪಡೆಯಲಾಗಿದೆ ಎಂದು ಡಿವೈಎಸ್‌ಪಿ ಟಿ. ರಂಗಪ್ಪ ತಿಳಿಸಿದ್ದಾರೆ.

ಬಾಂಬೆ ಸಲೀಂ ಮೇಲೆ ದೊಡ್ಡಬಳ್ಳಾಪುರ ಉಪವಿಭಾಗದ ವಿವಿಧ ಠಾಣೆಗಳಲ್ಲಿ ಈ ಹಿಂದೆ ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳ ಹೆಚ್ಚಿನ ವಿಚಾರಣೆಗೆ ಪೊಲೀಸ್‌ ವಶಕ್ಕೆ ಪಡೆಯಲಾಗಿದೆ. ಬಾಂಬೆ ಸಲೀಂನಿಂದ ವಂಚನೆ, ಹಣ ಸುಲಿಗೆ ಅಥವಾ ಜೀವ ಬೆದರಿಕೆಗೆ ಒಳಗಾದ ಸಾರ್ವಜನಿಕರು ಪೊಲೀಸ್‌ ಠಾಣೆಗೆ ದೂರು ಸಲ್ಲಿಸಿದರೆ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಮೊಬೈಲ್ 94808 02421 ಸಂಪರ್ಕಿಸಬಹುದು.

ಬಂಧನ: ಹರಿಯಾಣ ಮೂಲದ ಸಂಜ್‌ಕುಮಾರ್‌ ಎಂಬಾತನನ್ನು ಬಾಶೆಟ್ಟಿಹಳ್ಳಿಯಲ್ಲಿ ಇರಿದು ಕೊಲೆ ಮಾಡಿದ್ದ ಪ್ರಕರಣದಲ್ಲಿ ಕೆ.ಪಿ.ನಂದನ್‌ ಎಂಬಾತನನ್ನು ಬಂಧಿಸಲಾಗಿದೆ.

ಸ್ನೇಹಿತನಿಗೆ ಮೊಬೈಲ್ ಕೊಟ್ಟು ಸಾಲ ಪಡೆದ ಕಾರಣಕ್ಕೆ ಮೊಬೈಲ್‌ನಲ್ಲಿ ಸಂಗ್ರಹವಾಗಿದ್ದ ಫೋಟೊದಲ್ಲಿನ ಹುಡುಗಿಯೊಂದಿಗೆ ವಿವಾಹ ಮಾಡಿಸು ಎಂದು ಕೆಟ್ಟದಾಗಿ ಮಾತನಾಡುತ್ತ, ದಿನವು ಪೀಡಿಸುತ್ತಿದ್ದ. ಹಾಗಾಗಿ, ಕೊಲೆ ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಸರ್ಕಲ್‌ ಇನ್‌ಸ್ಪೆಕ್ಟರ್‌ ಎಂ.ಬಿ. ನವೀನ್‌ಕುಮಾರ್‌ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.