ಆನೇಕಲ್: ಪಟ್ಟಣದ ಪ್ರಾಥಮಿಕ ಮತ್ತು ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ನ ನೂತನ ಅಧ್ಯಕ್ಷರಾಗಿ ಬನಹಳ್ಳಿ ಸೋಮಶೇಖರ್ರೆಡ್ಡಿ ಮತ್ತು ಉಪಾಧ್ಯಕ್ಷರಾಗಿ ನೊಸೇನೂರಿನ ಪಿ.ಎನ್.ಭವಾನಿ ಅವಿರೋಧವಾಗಿ ಆಯ್ಕೆಯಾದರು.

ನೂತನ ಅಧ್ಯಕ್ಷ ಬನಹಳ್ಳಿ ಸೋಮಶೇಖರ್ರೆಡ್ಡಿ ಮಾತನಾಡಿ, ‘ಸಹಕಾರ ಸಂಘಗಳಲ್ಲಿ ರಾಜಕೀಯ ಸಲ್ಲದು. ಎಲ್ಲಾ ಪಕ್ಷಗಳ ಮುಖಂಡರು ಒಗ್ಗೂಡಿ ಅವಿರೋಧ ಆಯ್ಕೆಗೆ ಸಹಕರಿಸಿದ್ದಾರೆ. ಎಲ್ಲಾ ನಿರ್ದೇಶಕರ ವಿಶ್ವಾಸ ಪಡೆದು ರೈತರ ಸಮಸ್ಯೆಗಳಿಗೆ ಸ್ಪಂದಿಸಲಾಗುವುದು. ಸರ್ಕಾರದಿಂದ ದೊರೆಯುವ ಎಲ್ಲಾ ಸೌಲಭ್ಯಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ದಿಟ್ಟ ನಿರ್ಧಾರ ಕೈಗೊಳ್ಳಲಾಗುವುದು. ರೈತರ ಅಭಿವೃದ್ಧಿಗೆ ಬೇಕಾದ ಯೋಜನೆಗಳನ್ನು ರೂಪಿಸಲು ಕ್ರಿಯಾ ಯೋಜನೆ ತಯಾರಿಸಲಾಗುವುದು. ಆನೇಕಲ್ ಪಿಎಲ್ಡಿ ಬ್ಯಾಂಕ್ನ್ನು ರಾಜ್ಯದಲ್ಲಿಯೇ ಮಾದರಿ ಮಾಡುವ ನಿಟ್ಟಿನಲ್ಲಿ ಶ್ರಮಿಸಲಾಗುವುದು’ ಎಂದರು.

ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಸಂಘದ ನಿರ್ದೇಶಕರಾದ ಪಂಡಿತನ ಅಗ್ರಹಾರ ವಿ.ಆಂಜಿನಪ್ಪ, ಬಿದರಗುಪ್ಪೆ ಬಿ.ಜಿ.ಆಂಜಿನಪ್ಪ, ಪ್ರಭಾಕರ್, ಸತೀಶ್, ಮಧು ಎಸ್.ಮೂರ್ತಿ, ಆರ್.ಶ್ರೀನಿವಾಸ್, ಲಕ್ಷ್ಮೀನಾರಾಯಣ್, ಮಂಗಳಮ್ಮ, ಭದ್ರಪ್ಪ, ಶ್ರೀನಿವಾಸರೆಡ್ಡಿ, ಗಂಗಣ್ಣ ಅಭಿನಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.