ಕೋವಿಡ್: ವೈದ್ಯರ ತಂಡ ಪರಿಶೀಲನೆ

ದೇವನಹಳ್ಳಿ: ಬೆಂಗಳೂರು ವೈದ್ಯಕೀಯ ಕಾಲೇಜಿನ ತಜ್ಞ ವೈದ್ಯರ ತಂಡ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಕೋವಿಡ್-19 ನಿಯಂತ್ರಣ ಸಂಬಂಧ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸಿತು.
ಬೆಂಗಳೂರು ವೈದ್ಯಕೀಯ ಕಾಲೇಜಿನ ಸಮುದಾಯ ಔಷಧ ವಿಭಾಗದ ಮುಖ್ಯಸ್ಥರಾದ ಡಾ.ರಂಗನಾಥ್ ಅವರನ್ನು ಒಳಗೊಂಡ ಐವರು ತಜ್ಞ ವೈದ್ಯರ ತಂಡವು ಹೊಸಕೋಟೆ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿರುವ ಫಿವರ್ ಕ್ಲಿನಿಕ್‌ಗೆ, ಚಿಕ್ಕಕೊರಟಿ ಗ್ರಾಮದ ಕಂಟೈನ್ಮೆಂಟ್ ವಲಯ, ನಂದಗುಡಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಸೋಂಕು ಹರಡದಂತೆ ತೆಗೆದುಕೊಂಡ ಮುಂಜಾಗ್ರತೆ ಮತ್ತು ಅಗತ್ಯ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿತು.
ಬಳಿಕ ದೇವನಹಳ್ಳಿ ತಾಲ್ಲೂಕು, ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯತಿ ಕಚೇರಿಯಲ್ಲಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳ ಪ್ರವಾಸದ ವೇಳೆಯಲ್ಲಿ ಗಮನಿಸಿದ ಮಾಹಿತಿ ಹಂಚಿಕೊಂಡರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುಳಾದೇವಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಶ್ರೀನಿವಾಸ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಧರ್ಮೇಂದ್ರ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.