ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ಗ್ರಾಮಾಂತರ: ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಡದಂತೆ ಪತ್ರ ಚಳವಳಿ

Last Updated 10 ಜೂನ್ 2020, 12:23 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ಲಂಬಾಣಿ, ಭೋವಿ, ಕೊರಮ ಹಾಗೂ ಕೊರಚ ಸಮುದಾಯಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಡದಂತೆ ಒತ್ತಾಯಿಸಿ ಮುಖ್ಯಮಂತ್ರಿಗೆ ಪತ್ರ ಕಳುಹಿಸುವ ಚಳವಳಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಪ್ರದೇಶ ಬಂಜಾರ ಸೇವಾ ಸಂಘದ ಜಿಲ್ಲಾ ಅಧ್ಯಕ್ಷ ಗೋಪಾಲ್‌ನಾಯಕ್‌, ‘ರಾಜ್ಯ ಉಪಾಧ್ಯಕ್ಷ ರಾಮಾನಾಯಕ್‌, ‘ಪರಿಶಿಷ್ಟ ಜಾತಿ ಪಟ್ಟಿಯಿಂದ ಈ ನಾಲ್ಕು ಸಮುದಾಯಗಳನ್ನು ಕೈಬಿಡುವ ಸುದ್ದಿ ಹರಡಿದೆ. ಇಂತಹ ಸುದ್ದಿಗಳನ್ನು ಹರಡುತ್ತಿರುವವರ ವಿರುದ್ಧ ಸರ್ಕಾರ ಕಾನೂನು ಕ್ರಮ ಕೈಗೊಳ್ಳಬೇಕು. ಪರಿಶಿಷ್ಟ ಜಾತಿಯ ಪಟ್ಟಿಯಿಂದ ಕೈಬಿಡುವ ಯಾವುದೇ ಸಾಹಸದ ಕೆಲಸಕ್ಕೆ ಮುಂದಾಗದಂತೆ ಒತ್ತಡ ಹೇರುವ ಉದ್ದೇಶದಿಂದ ಚಳವಳಿ ನಡೆಸಲಾಗುತ್ತಿದೆ. ಇಡೀ ರಾಜ್ಯದಲ್ಲಿ ಬುಧವಾರ ಲಂಬಾಣಿ, ಬೋವಿ, ಕೊರಮ, ಕೊರಚ ಸಮುದಾಯದ ವತಿಯಿಂದ ಪತ್ರ ಚಳವಳಿ ನಡೆಸುವ ಮೂಲಕ ಎಚ್ಚರಿಕೆ ನೀಡಲಾಗುತ್ತಿದೆ. ಸರ್ಕಾರ ನಮ್ಮ ಸಮುದಾಯವನ್ನು ಪಟ್ಟಿಯಿಂದ ಕೈಬಿಡಲು ಮುಂದಾದರೆ ತೀವ್ರ ಪ್ರತಿಭಟನೆಗೆ ಸಜ್ಜಾಗುತ್ತೇವೆ’ ಎಂದರು.

ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಬಂಜಾರ ಸೇವಾ ಸಂಘದ ತಾಲ್ಲೂಕು ಅಧ್ಯಕ್ಷ ಹರೀಶ್‌ನಾಯಕ್‌, ಕಾರ್ಯಾಧ್ಯಕ್ಷ ಸಿದ್ದನಾಯಕ್‌, ನೌಕರರ ಸಂಘದ ಅಧ್ಯಕ್ಷ ಬಾಬು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT