ಭಾನುವಾರ, ಆಗಸ್ಟ್ 14, 2022
25 °C

ಕ್ವಾರಂಟೈನ್‌ ಕೇಂದ್ರಗಳ ಪರಿಶೀಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕನಸವಾಡಿ (ದೊಡ್ಡಬಳ್ಳಾಪುರ): ಬೆಂಗಳೂರು ವೈದ್ಯಕೀಯ ಕಾಲೇಜಿನ ತಜ್ಞ ವೈದ್ಯರ ತಂಡ ಇಂದು ತಾಲ್ಲೂಕಿನ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಜಿಲ್ಲಾಡಳಿತವು ಕೋವಿಡ್-19 ನಿಯಂತ್ರಣ ಸಂಬಂಧ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸಿತು.

ಬೆಂಗಳೂರು ವೈದ್ಯಕೀಯ ಕಾಲೇಜಿನ ಸಮುದಾಯ ಔಷಧಿ ವಿಭಾಗದ ಮುಖ್ಯಸ್ಥ ಡಾ.ರಂಗನಾಥ್ ಅವರನ್ನು ಒಳಗೊಂಡ ಐದು ತಜ್ಞ ವೈದ್ಯರ ತಂಡ ತಾಲ್ಲೂಕಿನ ಬಚ್ಚಹಳ್ಳಿಯಲ್ಲಿ ಇರುವ ಮೊರಾರ್ಜಿ ದೇಸಾಯಿ ವಿದ್ಯಾರ್ಥಿನಿಲಯದ ಕ್ವಾರಂಟೈನ್ ಕೇಂದ್ರ ಹಾಗೂ ಇಸ್ತೂರು ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ ಕ್ವಾರಂಟೈನ್ ಕೇಂದ್ರ, ನಗರದ ಸಮುದಾಯ ಆರೋಗ್ಯ ಕೇಂದ್ರ, ಸಾರ್ವಜನಿಕ ಆಸ್ಪತ್ರೆಯಲ್ಲಿರುವ ಫೀವರ್ ಕ್ಲಿನಿಕ್‌ನಲ್ಲಿ ಆರೋಗ್ಯ ತಪಾಸಣಾ ವ್ಯವಸ್ಥೆಯನ್ನು ಪರಿಶೀಲಿಸಿತು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುಳಾದೇವಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಧರ್ಮೇಂದ್ರ, ತಾಲ್ಲೂಕು ಆರೋಗ್ಯ ಅಧಿಕಾರಿ
ಡಾ.ಪರಮೇಶ್ವರ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು