ಉಪನ್ಯಾಸಕರ ನೇಮಕಕ್ಕೆ ಆಗ್ರಹಿಸಿ ಆನೇಕಲ್ ಗೋಪಾಲರಾಜು ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ತಹಶೀಲ್ದಾರ್ ಶಶಿಧರ್ ಮಾಡ್ಯಾಳ್ ಅವರಿಗೆ ಮನವಿ ಸಲ್ಲಿಸಿದರು
ರಮ್ಯ
ದರ್ಶನ್
ತ್ರಿವೇಣಿ ಗಾಂಧಿ
ಪ್ರತಿ ಸೆಮಿಸ್ಟರ್‌ನಲ್ಲಿಯೂ ಇದೇ ಸಮಸ್ಯೆ. ಪರೀಕ್ಷೆಯ ಕಡೆಯ ದಿನಗಳಲ್ಲಿ ಎಲ್ಲಾ ವಿಷಯಗಳಿಗೆ ಸಿದ್ಧರಾಗವುದು ಕಷ್ಟ. ಏಳು ವಿಷಯಗಳಿಗೆ ಒಬ್ಬರೇ ಉಪನ್ಯಾಸಕರಿದ್ದಾರೆ. ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳಿಗೆ ಹೆಚ್ಚಿನ ಹೊರೆಯಾಗುತ್ತದೆ
ರಮ್ಯ ಬಿಸಿಎ ವಿದ್ಯಾರ್ಥಿ
ಪಾಠಗಳೇ ನಡೆದಿಲ್ಲ ಪರೀಕ್ಷೆಗೆ ಸುತ್ತೋಲೆ ಹೊರಡಿಸಿದರೆ ವಿದ್ಯಾರ್ಥಿಗಳಿಗೆ ಒತ್ತಡ ಹೇರಿದಂತಾಗುತ್ತದೆ. ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸ ಮಾಡಿದಂತೆ ಗೋಪಾಲರಾಜು ಕಾಲೇಜಿನ ವಿದ್ಯಾರ್ಥಿಗಳ ಸ್ಥಿತಿಯಾಗಿದೆ. ಹಾಗಾಗಿ ಪರೀಕ್ಷೆಯನ್ನು ಮುಂದೂಡಬೇಕು
ದರ್ಶನ್ ಬಿಬಿಎ ವಿದ್ಯಾರ್ಥಿ
ಉಪನ್ಯಾಸಕರ ಕೊರತೆ ಬಿಬಿಎ ಮತ್ತು ಬಿಸಿಎ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯಕ್ಕೆ ಅಡ್ಡಿಯಾಗಿದೆ. ವಿಶ್ವವಿದ್ಯಾಲಯ ಮತ್ತು ಉನ್ನತ ಶಿಕ್ಷಣ ಇಲಾಖೆ ತ್ವರಿತವಾಗಿ ಕ್ರಮ ವಹಿಸಬೇಕು.
ತ್ರಿವೇಣಿ ಗಾಂಧಿ.ಸಿ ವಿದ್ಯಾರ್ಥಿನಿ
ಬೆಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ಹಲವು ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆ ನೀಗಿಸುವಂತೆ ಅ.8ರಂದು ಉನ್ನತ ಶಿಕ್ಷಣ ಇಲಾಖೆಯ ಆಯುಕ್ತರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು
ಬಿ.ಶಿವಣ್ಣ ಸಿಂಡಿಕೇಟ್ ಮಾಜಿ ಸದಸ್ಯ ಬೆಂಗಳೂರು ವಿಶ್ವವಿದ್ಯಾಲಯದ
ವಿಶ್ವವಿದ್ಯಾಲಯ ವ್ಯಾಪ್ತಿಯ ಸರ್ಕಾರಿ ಶಾಲೆಗಳಲ್ಲಿ ಉಪನ್ಯಾಸಕರ ಕೊರತೆ ಪರಿಹಾರಕ್ಕೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಪರೀಕ್ಷೆಗಳನ್ನು ನಡೆಸಲಾಗುವುದು