ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬನ್ನೇರುಘಟ್ಟದಲ್ಲಿ ಕಿರು ಸಫಾರಿ ಆರಂಭಿಸಲು ಚಿಂತನೆ

Last Updated 16 ಜನವರಿ 2021, 2:44 IST
ಅಕ್ಷರ ಗಾತ್ರ

ಆನೇಕಲ್: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ಕಿರು ಸಫಾರಿ ಪ್ರಾರಂಭಿಸುವ ಉದ್ದೇಶ ಹೊಂದಿದ್ದು ಕರ್ನಾಟಕ ಅರಣ್ಯ ಇಲಾಖೆ ವತಿಯಿಂದ ಸಫಾರಿ ನಿರ್ವಹಣೆ ಮಾಡುವ ಉದ್ದೇಶ ಹೊಂದಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪ್ರಾಯೋಗಿಕವಾಗಿ ಕಿರು ಸಫಾರಿ ಪ್ರಾರಂಭಿಸುವ ಉದ್ದೇಶ ಹೊಂದಲಾಗಿದೆ. ಬನ್ನೇರುಘಟ್ಟ ಹಕ್ಕಿಪಿಕ್ಕಿ ಕಾಲೊನಿ ಸಮೀಪದ ದೊಡ್ಡಣ್ಣನಕೆರೆಯಿಂದ ತಟಗುಪ್ಪೆವರೆಗೂ ರಾಷ್ಟ್ರೀಯ ಉದ್ಯಾನ ವ್ಯಾಪ್ತಿ ಅರಣ್ಯದಲ್ಲಿ ಎಂಟತ್ತು ಕಿ.ಮೀ. ದೂರದವರೆಗೆ ಸಫಾರಿ ವಾಹನಗಳಲ್ಲಿ ಪರಿಸರದ ಬಗ್ಗೆ ಆಸಕ್ತಿಯಿರುವವರನ್ನು ಕರೆದೊಯ್ಯುವ ವ್ಯವಸ್ಥೆ ಮಾಡುವ ಚಿಂತನೆ ನಡೆದಿದೆ.

ಒಂದೆರಡು ವಾಹನಗಳನ್ನು ಈ ಉದ್ದೇಶಕ್ಕೆ ಬಳಸಿ ಜನರಲ್ಲಿ ಪರಿಸರದ ಬಗ್ಗೆ, ಪ್ರಾಣಿಗಳ ಬಗ್ಗೆ ಮತ್ತು ಅರಣ್ಯ ಸಂರಕ್ಷಣೆ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಚಿಂತನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT