ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬನ್ನೇರುಘಟ್ಟ ಉದ್ಯಾನಕ್ಕೆ ಇಂದು ಹೆಚ್ಚಿನ ಸಂಖ್ಯೆಯಲ್ಲಿ ಜನ ಬರುವ ನಿರೀಕ್ಷೆ

Published 14 ಆಗಸ್ಟ್ 2023, 21:13 IST
Last Updated 14 ಆಗಸ್ಟ್ 2023, 21:13 IST
ಅಕ್ಷರ ಗಾತ್ರ

ಆನೇಕಲ್: ತಾಲ್ಲೂಕಿನ ಬನ್ನೇರುಘಟ್ಟ ಜೈವಿಕ ಉದ್ಯಾನವನ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮಂಗಳವಾರ ಕಾರ್ಯನಿರ್ವಹಿಸಲಿದೆ ಎಂದು ಉದ್ಯಾನದ ಕಾರ್ಯನಿರ್ವಾಹಕ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉದ್ಯಾನ ಪ್ರತಿ ಮಂಗಳವಾರ ರಜೆ ಇರಲಿದೆ. ಆಗಸ್ಟ್‌ 15ರ ಮಂಗಳವಾರ ಸ್ವಾತಂತ್ರ್ಯ ದಿನಾಚರಣೆ ಇರುವುದರಿಂದ ಹೆಚ್ಚು ಪ್ರವಾಸಿಗರು ಆಗಮಿಸುವ ನಿರೀಕ್ಷೆಯಿಂದ ಮೃಗಾಲಯ, ಸಫಾರಿ ಮತ್ತು ಚಿಟ್ಟೆ ಉದ್ಯಾನ ತೆರೆದಿರುತ್ತದೆ. ಆಗಸ್ಟ್‌ 16ರ ಬುಧವಾರ ಉದ್ಯಾನಕ್ಕೆ ರಜೆ ಘೋಷಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT