ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಾನತೆಯ ಹರಿಕಾರ ವಿಶ್ವಗುರು ಬಸವಣ್ಣ : ರಾಜಾಪುರ ಶ್ರೀ

Published 23 ಏಪ್ರಿಲ್ 2023, 12:58 IST
Last Updated 23 ಏಪ್ರಿಲ್ 2023, 12:58 IST
ಅಕ್ಷರ ಗಾತ್ರ

ಆನೇಕಲ್ : ಪಟ್ಟಣದಲ್ಲಿ ವೀರಶೈವ ಮಹಾಮಂಡಳಿ ಟ್ರಸ್ಟ್‌ ವತಿಯಿಂದ ಬಸವ ಜಯಂತಿ ಮಹೋತ್ಸವವನ್ನು ಭಾನುವಾರ ವಿಜೃಂಭಣೆಯಿಂದ ಆಚರಿಸಲಾಯಿತು. ಬಸವ ಜಯಂತಿಯ ಪ್ರಯುಕ್ತ ಪಟ್ಟಣದ ಪ್ರಮುಖ ಬೀದಿಗಳಲ್ಲಿ ವೈಭವದ ಮೆರವಣಿಗೆಯನ್ನು ಮಾಡಲಾಯಿತು.

ರಾಜಾಪುರ ಸಂಸ್ಥಾನ ಮಠದ ಡಾ.ರಾಜೇಶ್ವರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ ವಿಶ್ವಗುರು ಬಸವಣ್ಣ ಅವರು ಸಮಾನತೆಯ ಹರಿಕಾರರಾಗಿದ್ದಾರೆ. ವಚನಗಳ ಮೂಲಕ ಜಗತ್ತಿಗೆ ಜ್ಞಾನದ ಜ್ಯೋತಿಯನ್ನು ಕೊಟ್ಟಿದ್ದಾರೆ. ಅವರ ವಚನಗಳಲ್ಲಿನ ತತ್ವ ಸಿದ್ಧಾಂತಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು. ಪ್ರತಿಯೊಬ್ಬರು ಕಾಯಕ ತತ್ವಕ್ಕೆ ಮನ್ನಣೆ ನೀಡಬೇಕು ಎಂಬುದು ಬಸವಣ್ಣನವರ ಮೂಲ ಉದ್ದೇಶವಾಗಿದೆ ಎಂದರು.

ಬಸವಣ್ಣನವರು ತಮ್ಮ ವಚನಗಳಲ್ಲಿ ಕಾಯಕತತ್ವ, ಮೌಲ್ಯಗಳನ್ನು ಭಿತ್ತಿದ ಮಹಾನ್‌ಚೇತನ. ಇವರ ವಚನಗಳು ಸರ್ವಕಾಲೀಕವಾಗಿದ್ದು ಇಂದಿಗೂ ಪ್ರಸ್ತುತವಾಗಿದೆ. ಸಮಾನತೆ, ಸಹಪಂಕ್ತಿ ಬೋಜನ, ಅನುಭವ ಮಂಟಪದ ಮೂಲಕ ಚಿಂತನೆಗಳನ್ನು ಮಾಡುವ ವಿಶೇಷ ಕಾರ್ಯಕ್ರಮಗಳನ್ನು 12ನೇ ಶತಮಾನದಲ್ಲಿಯೇ ಬಸವಣ್ಣನವರು ರೂಪಿಸಿದ್ದರು. ಇದರಿಂದಾಗಿ ಸಮಾಜದಲ್ಲಿನ ಓರೆಕೋರೆಗಳನ್ನು ತಿದ್ದಲು ಶ್ರಮಿಸಿದರು. ಪ್ರತಿಯೊಬ್ಬರು ಕೆಟ್ಟ ಕೆಲಸಗಳನ್ನು ಮಾಡದೇ ಪ್ರಾಮಾಣಿಕ ನಿಷ್ಠೆಯಿಂದ ಕಾಯಕ ಮಾಡುವ ಮೂಲಕ ಬದುಕಿನ ಸಾರ್ಥಕತೆ ಕಂಡುಕೊಳ್ಳಬೇಕು ಎಂದರು.

ಗುಮ್ಮಳಾಪುರ ಸಂಸ್ಥಾನ ಮಠದ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ ಬಸವ ಜಯಂತಿಯನ್ನು ಧಾರ್ಮಿಕವಾಗಿ ಆಚರಿಸುವುದರ ಜೊತೆಗೆ ಅವರ ಸಿದ್ದಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಮ ಸಮಾಜದ ನಿರ್ಮಾಣಕ್ಕೆ ಪ್ರತಿಯೊಬ್ಬರು ಶ್ರಮಿಸಬೇಕು. ಬಸವಾದಿ ಶರಣರು ಜೀವನದಲ್ಲಿ ಮೌಲ್ಯಗಳ ಅಳವಡಿಕೆಯ ಬಗ್ಗೆ ತಿಳಿಸಿದ್ದಾರೆ. ಪ್ರತಿಯೊಬ್ಬರು ಶರಣರ ಸಿದ್ದಾಂತಗಳನ್ನು ಅಳವಡಿಸಿಕೊಳ್ಳಬೇಕು ಎಂದರು.

ಪಟ್ಟಣದ ಥಳಿ ರಸ್ತೆಯ ಬಸವೇಶ್ವರ ದೇವಾಲಯದಲ್ಲಿ ಬಸವ ಜಯಂತಿ ಪ್ರಯುಕ್ತ ಸ್ವಾಮಿಗೆ ಅಭಿಷೇಕ, ವಿಶೇಷ ಅಲಂಕಾರ ಮಾಡಲಾಗಿತ್ತು. ಬೆಳಗಿನಿಂದಲೂ ಭಕ್ತರು ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಸಂಜೆ ೩ರ ಸುಮಾರಿಗೆ ಬಸವೇಶ್ವರ ತೈಲವರ್ಣ ಭಾವಚಿತ್ರ, ಜಗದ್ಗುರು ರೇಣುಕಾಚಾರ್ಯರು ಮತ್ತು ಶಿವ ಪಾರ್ವತಿಯರ ಮೂರ್ತಿಯ ಪಲ್ಲಕ್ಕಿ ಉತ್ಸವ ನಡೆಯಿತು. ವೀರಗಾಸೆ, ನಂದಿಧ್ವಜ, ಪಟದ ಕುಣಿತ, ಪೂಜಾ ಕುಣಿತ, ಡೊಳ್ಳುಕುಣಿತ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ಮೆರವಣಿಗೆಯ ಮೆರಗು ಹೆಚ್ಚಿಸಿದವು. ಮಂಗಳವಾಧ್ಯದೊಂದಿಗೆ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿತು. ಮನೆ ಮನೆಗಳ ಬಳಿ ಬಸವಣ್ಣನವರ ಪಲ್ಲಕ್ಕಿಗೆ ಪೂಜೆ ಸಲ್ಲಿಸಲಾಯಿತು.

ಬಿಜೆಪಿ ಅಭ್ಯರ್ಥಿ ಹುಲ್ಲಹಳ್ಳಿ ಶ್ರೀನಿವಾಸ್‌, ಪುರಸಭಾ ಅಧ್ಯಕ್ಷ ಎನ್‌.ಎಸ್.ಪದ್ಮನಾಭ, ಸದಸ್ಯರಾದ ರಾಜೇಂದ್ರಬಾಬು, ಸುರೇಶ್‌, ವೀರಶೈವ ಮಹಾಮಂಡಳಿ ಟ್ರಸ್ಟ್ ಅಧ್ಯಕ್ಷ ಕಿರಣ್‌ಪ್ರಕಾಶ್, ಮುಖಂಡರಾದ ಶೈಲೇಂದ್ರ ಕುಮಾರ್‌, ಟಿ.ವಿ.ರಾಜಶೇಖರ್, ಕೆ.ಜಯಣ್ಣ, ಜಗದೀಶ್‌, ನಾಗಭೂಷಣ್, ಎಸ್‌.ಆರ್‌.ಎಸ್.ಚಂದ್ರಶೇಖರ್, ಡಿ.ಅಂಬರೀಷ್, ಮಲ್ಲೇಶ್, ವೀರಣ್ಣ, ಕೀರ್ತಿಕುಮಾರ್, ಗೆರಟಿಗನಬೆಲೆ ನಂಜುಂಡ, ಶಿವಕುಮಾರ್‌, ರಾಜುಪವಾಟೆ ಹಾಜರಿದ್ದರು.

ತಾಲ್ಲೂಕಿನ ವಿವಿಧೆಡೆ ಬಸವ ಜಯಂತಿ ಕಾರ್ಯಕ್ರಮವನ್ನು ಶ್ರದ್ಧಾಭಕ್ತಿಗಳಿಂದ ನೆರವೇರಿಸಲಾಯಿತು. ಗೆರಟಿಗನಬೆಲೆಯಲ್ಲಿ ಪವಾಡ ಬಸವೇಶ್ವರ ಸ್ವಾಮಿಗೆ ಅಭಿಷೇಕ, ವಿಶೇಷ ಪೂಜೆ ನಡೆಸಲಾಯಿತು. ಮಾಸ್ತೇನಹಳ್ಳಿ ವೀರಭದ್ರಸ್ವಾಮಿ ದೇವಾಲಯ ಅಕ್ಷಯ ತೃತೀಯ ಹಾಗೂ ಬಸವ ಜಯಂತಿ ಪ್ರಯುಕ್ತ ವಿಶೇಷ ಪೂಜೆ, ಅಲಂಕಾರ ಮಾಡಲಾಗಿತ್ತು. ಬೆಳಗಿನಿಂದಲೂ ಭಕ್ತರು ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ಜನ ಜಂಗುಳಿಯಿಂದ ತುಂಬಿದ್ದ ಚಿನ್ನದ ಅಂಗಡಿಗಳು : ಅಕ್ಷಯ ತೃತೀಯ ದಿನ ಚಿನ್ನ, ಬೆಳ್ಳಿ ಕೊಂಡರೆ ಒಳ್ಳೆಯದು ಎಂಬ ಭಾವನೆ ಜನರಲ್ಲಿದೆ. ಹಾಗಾಗಿ ಚಿನ್ನದ ಅಂಗಡಿಗಳಲ್ಲಿ ಆಭರಣಗಳನ್ನು ಕೊಳ್ಳಲು ಜನಜಂಗುಳಿ ಜಮಾಯಿಸಿತ್ತು. ಚಿನ್ನ ಕೊಳ್ಳಲು ಗ್ರಾಹಕರು ಮುಗಿಬಿದ್ದಿದ್ದ ದೃಶ್ಯ ಸಾಮಾನ್ಯವಾಗಿತ್ತು. ಪಟ್ಟಣದ ಎಲ್ಲಾ ಚಿನ್ನದ ಅಂಗಡಿಗಳ ಬಳಿ ಗ್ರಾಹಕರ ದಂಡು ಕಂಡುಬಂದಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT