ದೊಡ್ಡಬಳ್ಳಾಪುರ: ಇಲ್ಲಿನ ಬಾಶೆಟ್ಟಿಹಳ್ಳಿ ಕೈಗಾರಿಕ ಪ್ರದೇಶದ ಅಡ್ವಾನ್ಸ್ ಕೇಬಲ್ ಕಾರ್ಖಾನೆಯಲ್ಲಿ ಸೋಮವಾರ ಸಂಜೆ 5ಕ್ಕೆ ಬೆಂಕಿ ಕಾಣಿಸಿಕೊಂಡಿದ್ದು, ಸತತ ನಾಲ್ಕು ತಾಸುಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.

ಬೆಂಗಳೂರಿನಿಂದ ಬಂದಿದ್ದ ಎನ್ಡಿಆರ್ಎಫ್ ಸಿಬ್ಬಂದಿ ಮತ್ತು ಹತ್ತು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದು, ಬೆಂಕಿಯ ಕೆನ್ನಾಲಿಗೆ ವ್ಯಾಪಿಸುತ್ತಲೇ ಇದೆ. ಬೆಂಕಿ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ.

ಕೈಗಾರಿಕಾ ಪ್ರದೇಶದಲ್ಲಿ ದಟ್ಟವಾದ ಹೊಗೆ ಆವರಿಸಿಕೊಂಡಿದೆ.ಈ ಕಾರ್ಖಾನೆ ಸುತ್ತಲೂ ಇತರ ಕೈಗಾರಿಕಾ ಘಟಕಗಳಿರುವ ಕಾರಣ ಅವುಗಳಿಗೂ ಬೆಂಕಿ ತಗಲುವ ಆತಂಕ ಎದುರಾಗಿದೆ.

ಪ್ರಾಥಮಿಕ ವರದಿಗಳ ಪ್ರಕಾರ ಘಟನೆಯಲ್ಲಿ ಪ್ರಾಣಹಾನಿಯಾದ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಬೆಂಕಿ ಕಾಣಿಸಿಕೊಳ್ಳುತ್ತಲೇ ಕಾರ್ಮಿಕರು ಹೊರಗೆ ಓಡಿ ಬಂದಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಕೇಬಲ್ ತಯಾರಿಕಾ ಕಂಪನಿಗೆ ಕೋಟ್ಯಂತರ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

ಬೆಂಗಳೂರು ರಾಜ್ಯ ಹೆದ್ದಾರಿಗೆ ಸಮೀಪವೇ ಕಾರ್ಖಾನೆ ಇರುವುದರಿಂದ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿದೆ. ಘಟನಾ ಸ್ಥಳದಲ್ಲಿ ಗ್ರಾಮಾಂತರ ಠಾಣೆ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ತಹಶೀಲ್ದಾರ್ ಮಲ್ಲಪ್ಪ ಕೆ.ಯಗೋಳ ಭೇಟಿ ನೀಡಿ ಮಾಹಿತಿ ಪಡೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.