ಶನಿವಾರ, ಮಾರ್ಚ್ 28, 2020
19 °C

ದೊಡ್ಡಬಳ್ಳಾಪುರ: ಕಸ ವಿಲೇವಾರಿಗೆ ವಿರೋಧ, ಅನಿರ್ದಿಷ್ಟಾವಧಿ ಧರಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೊಡ್ಡಬಳ್ಳಾಪುರ: ಬಿಬಿಎಂಪಿ ವ್ಯಾಪ್ತಿಯಿಂದ ತಾಲ್ಲೂಕಿನ ಗುಂಡ್ಲಹಳ್ಳಿ, ಎಂಎಸ್‌ಜಿಪಿ ಕಸವಿಲೇವಾರಿ ಘಟಗಳಿಗೆ ಕಸ ತಂದು ಸುರಿಯುವುದನ್ನು ಬಂದ್ ಮಾಡುವಂತೆ ಆಗ್ರಹಿಸಿ  ಬಿಬಿಎಂಪಿ ತ್ಯಾಜ್ಯ ವಿಲೇವಾರಿ ವಿರೋಧಿ ಹೋರಾಟ ಸಮಿತಿಯಿಂದ ಅನಿರ್ದಿಷ್ಟವಾಧಿ ಧರಣಿ ಆರಂಭವಾಗಿದೆ. 

ಕಸ ವಿಲೇವಾರಿ ಘಟಕಗಳ ಸುತ್ತಲಿನ ಗ್ರಾಮಗಳ ರೈತರು ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಸಂಘಟನೆಗಳ ಪದಾಧಿಕಾರಿಗಳು ನೂರಾರು ಸಂಖ್ಯೆಯಲ್ಲಿ ಧರಣಿಯಲ್ಲಿ ಭಾಗವಹಿಸಿದ್ದಾರೆ. 

ಬೆಂಗಳೂರಿನಿಂದ ಪ್ರತಿ ದಿನ ಸುಮಾರು 170ಕ್ಕೂ ಹೆಚ್ಚಿನ ಲಾರಿಗಳು ಕಸ ತುಂಬಿಕೊಂಡು ಬರುತಿದ್ದವು. ಆದರೆ ಧರಣಿ ಹಿನ್ನೆಲೆಯಲ್ಲಿ ಶುಕ್ರವಾರ ಯಾವುದೇ ಕಸದ ಲಾರಿಗಳು ಈ ಕಡೆಗೆ ಸುಳಿದಿಲ್ಲ.

ಧರಣಿ ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಂದೋಬಸ್ತ್ ಏರ್ಪಡಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು