ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ ಆರಂಭ

ಸೂಲಿಬೆಲೆ: ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಸಮಿಕ್ಷೆ ಕೈಗೊಳ್ಳಲಾಗಿದೆ. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಅಂಗನವಾಡಿ ಕೇಂದ್ರ ಮತ್ತು ಶಾಲೆಗಳಿಗೆ ಸೇರಿಸಲು ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಶ್ರೀನಾಥಗೌಡ ತಿಳಿಸಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ ಕಾರ್ಯಕ್ರಮಕ್ಕೆ ಮಂಗಳವಾರ ಚಾಲನೆ ನೀಡಿ ಅವರು ಮಾತನಾಡಿದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದಿಲೀಪ್, ತುಪೇಲ್ ಷರೀಪ್ ಹಾಗೂ ಸಿಬ್ಬಂದಿ ಇದ್ದರು.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.