ಹೊಸಕೋಟೆ: ನಗರ ಹೊರವಲಯದ ಬೂದಿಗೆರೆ ಕ್ರಾಸ್ನಲ್ಲಿರುವ ಬೆಂಗಾಲ್ ಲ್ಯಾಂಪ್ಸ್ ಕಾರ್ಖಾನೆಯ ಕಾರ್ಮಿಕರ ಸರ್ವ ಸದಸ್ಯರ ಸಭೆಯು ಆ. 8ರಂದು ಬೆಳಿಗ್ಗೆ 10.30ಕ್ಕೆ ಕಾರ್ಖಾನೆಯ ಮುಂಭಾಗದಲ್ಲಿ ನಡೆಯಲಿದ್ದು, ಎಲ್ಲಾ ಸದಸ್ಯರು ಭಾಗವಹಿಸಬೇಕು ಎಂದು ಕಾರ್ಮಿಕ ಸಂಘದ ಅಧ್ಯಕ್ಷ ಕ್ಯಾಸೆಟ್ ನಾಗರಾಜ್ತಿಳಿಸಿದ್ದಾರೆ.

ಕಾರ್ಮಿಕರಿಗೆ ಯಾವುದೇ ಮಾಹಿತಿ ನೀಡದೆ ಕಳೆದ 35 ವರ್ಷಗಳ ಹಿಂದೆ ಕಾರ್ಖಾನೆಯನ್ನು ಮುಚ್ಚಿ ಕಾರ್ಮಿಕರನ್ನು ನಡುನೀರಿನಲ್ಲಿ ಬಿಟ್ಟು ಹೋಗಿದ್ದ ಕಾರ್ಖಾನೆ ವಿರುದ್ಧ ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದೆ. ಈ ಬಗ್ಗೆ ಈವರೆಗೆ ಆಗಿರುವ ಬೆಳವಣಿಗೆಯನ್ನು ವಕೀಲರ ಸಭೆಯಲ್ಲಿ ತಿಳಿಸಲಾಗಿದೆ. ಕಾರ್ಮಿಕರ ಹಿತದೃಷ್ಟಿಯಿಂದ ತೆಗೆದುಕೊಂಡಿರುವ ಕ್ರಮಗಳ ಮಾಹಿತಿಯನ್ನು ವಕೀಲರು ಸಭೆಗೆ ತಿಳಿಸುತ್ತಾರೆ. ಆದ್ದರಿಂದ ಈ ಸಭೆ ಹೆಚ್ಚಿನ ಮಹತ್ವದ್ದಾಗಿದೆ. ಎಲ್ಲಾ ಕಾರ್ಮಿಕರು ತಪ್ಪದೇ ಸಭೆಗೆ ಹಾಜರಾಗಬೇಕು ಎಂದು ಸಂಘದ ಕಾರ್ಯದರ್ಶಿ ಅಬ್ದುಲ್ಲಾ ಸಾಬ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.