ದೇವನಹಳ್ಳಿ: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಗುರುವಾರ ಬೆಳಗ್ಗೆ ವಿಮಾನ ಇಳಿಯುವಾಗ ಹಿಂಭಾಗ ಆಕಸ್ಮಿಕವಾಗಿ ನೆಲಕ್ಕೆ ತಾಗಿದೆ. ಆದರೆ, ಪೈಲಟ್ ತಕ್ಷಣ ವಿಮಾನವನ್ನು ಮೇಲಕ್ಕೆ ಹಾರಿಸಿದ್ದರಿಂದ ಅವಘಡ ತಪ್ಪಿದೆ.

ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟ ಏರ್ ಇಂಡಿಯಾ ವಿಮಾನ(ಏಐ2651) ಗುರುವಾರ ಬೆಳಗ್ಗೆ 10.55ಕ್ಕೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ಹಿಂಭಾಗ ನೆಲಕ್ಕೆ ತಾಗಿದೆ(ಟೇಲ್ ಸ್ಟ್ರೈಕ್). ತಕ್ಷಣ ಎಚ್ಚೆತ್ತ ಪೈಲಟ್ ವಿಮಾನವನ್ನು ಮತ್ತೆ ಮೇಲಕ್ಕೆ ಹಾರಿಸಿದ್ದಾನೆ. ಸ್ವಲ್ಪ ಹೊತ್ತು ವಿಮಾನ ನಿಲ್ದಾಣದ ಸುತ್ತಮುತ್ತ ಆಗಸದಲ್ಲಿ ಹಾರಾಟ ನಡೆಸಿದ ಬಳಿಕ ಸುರಕ್ಷಿತವಾಗಿ ಕೆಳಗೆ ಇಳಿಸಲಾಯಿತು.

‘ಪ್ರಯಾಣಿಕರಿಗೆ ಉಂಟಾದ ತೊಂದರೆಗೆ ವಿಷಾದ ವ್ಯಕ್ತಪಡಿಸುತ್ತೇವೆ. ಈ ಘಟನೆಯ ಬಳಿಕ ತಾಂತ್ರಿಕ ಪರಿಶೀಲನೆಗಾಗಿ ವಿಮಾನವನ್ನು ಸಂಚಾರದಿಂದ ತಾತ್ಕಾಲಿಕವಾಗಿ ಹೊರಗಿಡಲಾಗಿದೆ. ನಾಗರಿಕ ವಿಮಾನಯಾನ ನಿಯಮಾವಳಿಗಳ ಪ್ರಕಾರ ಸಂಬಂಧಿತ ಅಧಿಕಾರಿಗಳ ಸಮನ್ವಯದಲ್ಲಿ ತನಿಖೆ ನಡೆಸಲಾಗುವುದು’ ಎಂದು ಎಂದು ಏರ್ ಇಂಡಿಯಾ ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ.

‘ಬೆಂಗಳೂರಿನಿಂದ ದೆಹಲಿಗೆ ತೆರಳಬೇಕಿದ್ದ AI2652 ವಿಮಾನ ಸಂಚಾರ ರದ್ದುಗೊಳಿಸಲಾಗಿದೆ. ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆ ನಮ್ಮ ಮೊದಲ ಆದ್ಯತೆ. ಪ್ರಯಾಣಿಕರಿಗೆ ಅಗತ್ಯ ಸಹಾಯ ಒದಗಿಸಲಾಗುತ್ತಿದೆ. ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುವುದು’ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-15-263400377

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.