ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸಂಜೆ ಚೆನ್ನೈಗೆ ತೆರಳಬೇಕಿದ್ದ ಇಂಡಿಗೊ ವಿಮಾನದಲ್ಲಿ ಹೊಗೆ ಕಾಣಿಸಿಕೊಂಡ ಕಾರಣ 230ಕ್ಕೂ ಹೆಚ್ಚು ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ತುರ್ತಾಗಿ ರಕ್ಷಿಸಲಾಯಿತು.

ಇಂಡಿಗೊ ಸಂಸ್ಥೆಗೆ ಸೇರಿದ 6E 6017 ಸಂಖ್ಯೆಯ ವಿಮಾನ ಬೆಂಗಳೂರಿನಿಂದ ಚೆನ್ನೈಗೆ ಹೊರಡಲು ಸಿದ್ಧವಾಗಿತ್ತು. ವಿಮಾನ ರನ್ವೇ ಕಡೆಗೆ ಚಲಿಸುತ್ತಿದ್ದ ವೇಳೆ ಹೊಗೆ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಸಿಬ್ಬಂದಿ ತಕ್ಷಣವೇ ಎಚ್ಚೆತ್ತುಕೊಂಡು ವಿಮಾನವನ್ನು ನಿಲ್ಲಿಸಿ, ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲ ಪ್ರಯಾಣಿಕರು ಹಾಗೂ ಸಿಬ್ಬಂದಿಯನ್ನು ತುರ್ತು ನಿರ್ಗಮನ ಮಾರ್ಗಗಳ ಮೂಲಕ ನಿರ್ಗಮಿಸುವಂತೆ ಸೂಚಿಸಲಾಯಿತು.

ಘಟನೆಯಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾದರೂ, ಯಾವುದೇ ಅನಾಹುತ ಸಂಭವಿಸಿಲ್ಲ. ಯಾರಿಗೂ ಗಾಯಗಳಾಗಿಲ್ಲ ಎಂದು ವಿಮಾನ ನಿಲ್ದಾಣದ ಮೂಲಗಳು ಸ್ಪಷ್ಟಪಡಿಸಿವೆ.

ಹೊರಬಂದ ಪ್ರಯಾಣಿಕರನ್ನು ವಿಮಾನ ನಿಲ್ದಾಣದ ಟರ್ಮಿನಲ್ಗೆ ಕರೆದೊಯ್ಯಲಾಯಿತು. ಅಲ್ಲಿಯೇ ಅಗತ್ಯ ನೆರವು ಹಾಗೂ ಮಾಹಿತಿ ಒದಗಿಸಲಾಯಿತು.

ಘಟನೆ ನಂತರ ಇಂಡಿಗೊ ಸಂಸ್ಥೆಯು ಪ್ರಯಾಣಿಕರ ಪ್ರಯಾಣ ವ್ಯತ್ಯಯವಾಗದಂತೆ ಪರ್ಯಾಯ ವಿಮಾನದ ವ್ಯವಸ್ಥೆ ಮಾಡಿತು. ಬಳಿಕ ಅದೇ ಮಾರ್ಗದಲ್ಲಿ ಮತ್ತೊಂದು ವಿಮಾನವನ್ನು ಕಾರ್ಯಾಚರಣೆಗೆ ಬಳಸಲಾಯಿತು.

ವಿಮಾನದಲ್ಲಿ ಹೊಗೆ ಕಾಣಿಸಿಕೊಳ್ಳಲು ತಾಂತ್ರಿಕ ದೋಷ ಕಾರಣವೇ ಅಥವಾ ಬೇರೆ ಯಾವುದೇ ಸಮಸ್ಯೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ವಿಮಾನವನ್ನು ತಾಂತ್ರಿಕ ತಪಾಸಣೆಗೆ ಒಳಪಡಿಸಲಾಗಿದೆ. ವಿಮಾನ ನಿಲ್ದಾಣ ಅಧಿಕಾರಿಗಳು ಹಾಗೂ ಇಂಡಿಗೊ ತಾಂತ್ರಿಕ ತಂಡ ಘಟನೆ ಕುರಿತು ತನಿಖೆ ಆರಂಭಿಸಿದೆ.

ಈ ಘಟನೆ ಹಿನ್ನೆಲೆಯಲ್ಲಿ ಕೆಲಕಾಲ ವಿಮಾನ ನಿಲ್ದಾಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ ಸಂಚಾರದಲ್ಲಿ ವ್ಯತ್ಯಯ ಉಂಟಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-15-380281012

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.