ದೇವನಹಳ್ಳಿ: ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ಮತ್ತು ಶುಕ್ರವಾರ ನಡೆದ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆಯಲ್ಲಿ 51.06 ಕೆ.ಜಿ ಹೈಡ್ರೋಪೋನಿಕ್ ಗಾಂಜಾ ವಶಕ್ಕೆ ಪಡೆದಿದ್ದಾರೆ.

ಐದು ಪ್ರತ್ಯೇಕ ಪ್ರಕರಣಗಳಲ್ಲಿ ಏಳು ಪ್ರಯಾಣಿಕರನ್ನು ಬಂಧಿಸಿ, ಮಾದಕ ವಸ್ತುಗಳ ನಿಯಂತ್ರಣ ಕಾಯಿದೆ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಮೂಲಗಳು ತಿಳಿಸಿವೆ.

ಗುರುವಾರ ನಡೆದ ತಪಾಸಣೆಯಲ್ಲಿ ಒಟ್ಟು ನಾಲ್ಕು ಪ್ರತ್ಯೇಕ ಪ್ರಕರಣ ದಾಖಲಾಗಿದ್ದು, ಬ್ಯಾಂಕಾಂಗ್ನಿಂದ ಬಂದ ಪ್ರಯಾಣಿಕರ ಬಳಿ 24.83 ಕೆ.ಜಿ ತೂಕದ ₹8.67 ಕೋಟಿ ಮೌಲ್ಯದ ಗಾಂಜಾವನ್ನು ಜಪ್ತಿ ಮಾಡಲಾಗಿದೆ.

ಶುಕ್ರವಾರ ನಡೆದ ಕಾರ್ಯಚರಣೆಯಲ್ಲಿ ಬ್ಯಾಂಕಾಕ್ನಿಂದ ಬಂದ ಮೂವರು ಪ್ರಯಾಣಿಕರಿಂದ ₹9.81 ಕೋಟಿ ಮೌಲ್ಯದ 26.23 ಕೆ.ಜಿ ಹೈಡ್ರೋಪೋನಿಕ್ ಗಾಂಜಾ ವಶಕ್ಕೆ ಪಡೆಯಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-15-860731012

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.