ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಅಂಗಡಿಗಳಲ್ಲಿ ವಾಚ್, ಪವರ್ ಬ್ಯಾಂಕ್ ಹಾಗೂ ಹೇರ್ ಬ್ಯಾಂಡ್ ಕಳವು ಮಾಡಿದ್ದ ಪ್ರಕರಣದಲ್ಲಿ ಎಂಟು ವರ್ಷದಿಂದ ತಲೆಮರೆಸಿಕೊಂಡಿದ್ದ ಯುವತಿಯನ್ನು ಪೊಲೀಸರು ಈಚೆಗೆ ಬಂಧಿಸಿದ್ದಾರೆ.

ಪಶ್ಚಿಮ ಬಂಗಾಳದ ಮನ್ಮನ್ ಹುಸೇನ್ (30) ಬಂಧಿತ ಆರೋಪಿ. ನ್ಯಾಯಾಲಯದ ವಿಚಾರಣೆಗೆ ಗೈರಾಗಿದ್ದ ಹಿನ್ನೆಲೆ ಆಕೆಯ ವಿರುದ್ಧ ಜಾಮೀನುರಹಿತ ವಾರಂಟ್ ಜಾರಿಯಾಗಿತ್ತು.

ಇತ್ತೀಚೆಗೆ ಇಂದಿರಾನಗರದಲ್ಲಿ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ವೇಳೆ ಸ್ಥಳೀಯರ ಮಾಹಿತಿ ಮೇರೆಗೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ, 2018ರ ಕಳವು ಪ್ರಕರಣದ ಆರೋಪಿ ಎಂಬುದು ಪತ್ತೆ ಹಚ್ಚಲಾಗಿದೆ. ಬಳಿಕ ವಿಮಾನ ನಿಲ್ದಾಣದ ಪೊಲೀಸರು ಆಕೆಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. 2018ರಲ್ಲಿ ಬೆಂಗಳೂರು ವಿಮಾನ ನಿಲ್ದಾಣದ ಅಂಗಡಿಗಳಿಂದ ಸುಮಾರು ₹21 ಸಾವಿರ ಮೌಲ್ಯದ ವಾಚ್ ಸೇರಿದಂತೆ ಪವರ್ ಬ್ಯಾಂಕ್ ಹಾಗೂ ಹೇರ್ ಬ್ಯಾಂಡ್ ಕಳವು ಮಾಡಿದ್ದ ಆರೋಪದಡಿ ಪ್ರಕರಣ ದಾಖಲಾಗಿತ್ತು. ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿಯನ್ನು ಬಂಧಿಸಲಾಗಿತ್ತು. ಬಳಿಕ ವಿಚಾರಣೆಗೆ ಗೈರಾಗಿದ್ದ ಹಿನ್ನೆಲೆಯಲ್ಲಿ ನ್ಯಾಯಾಲಯ ಜಾಮೀನುರಹಿತ ವಾರಂಟ್ ಹೊರಡಿಸಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-15-1931890005

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.