ಲಕ್ಷ್ಮಿಪುರ (ಹೊಸಕೋಟೆ): ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನೂತನ 10 ವೇಗದೂತ ಮಾರ್ಗಗಳ ಬಸ್ ಸೇವೆಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಶುಕ್ರವಾರ ಚಾಲನೆ ನೀಡಿದರು.

ತಾಲ್ಲೂಕಿನ ನಂದಗುಡಿ ಹೋಬಳಿಯ ಲಕ್ಷ್ಮಿಪುರ ಗ್ರಾಮದಲ್ಲಿ ಎಚ್. ಕ್ರಾಸ್ನಿಂದ ಟಿನ್ ಫ್ಯಾಕ್ಟರಿಗೆ 7 ಶೆಡ್ಯೂಲ್ಗಳಲ್ಲಿ 60 ಸುತ್ತು ಹಾಗೂ ಹೊಸಕೋಟೆಯಿಂದ ದೇವನಹಳ್ಳಿ, ದೊಡ್ಡಬಳ್ಳಾಪುರ ಮಾರ್ಗವಾಗಿ ನೆಲಮಂಗಲಕ್ಕೆ 11 ಶೆಡ್ಯೂಲ್ಗಳಲ್ಲಿ 25 ಸುತ್ತುಗಳ ಸೇವೆಗೆ ಒಟ್ಟು 10 ಬಸ್ಗಳಿಗೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.

ಈ ವೇಳೆ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, ಬೆಂಗಳೂರು ನಗರ ದಿನೇ ದಿನೇ ವ್ಯಾಪಕವಾಗಿ ಬೆಳೆಯುತ್ತಿದೆ. ಅದಕ್ಕೆ ಅನುಗುಣವಾಗಿ ಸಾರ್ವಜನಿಕರ ಅನುಕೂಲಕ್ಕೆ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು. ಸದ್ಯ ಬೆಂಗಳೂರು ನಗರವೊಂದರಲ್ಲೇ 1.40 ಕೋಟಿಯಷ್ಟು ಜನರಿದ್ದು, ಪ್ರತಿನಿತ್ಯ ಬಿಎಂಟಿಸಿ ಸಾರಿಗೆ ಸಂಸ್ಥೆ ವಾಹನಗಳಲ್ಲೇ ದಿನಕ್ಕೆ 40 ಲಕ್ಷದಷ್ಟು ಜನರು ಓಡಾಡುತ್ತಿದ್ದಾರೆ.ಇತ್ತೀಚೆಗೆ ತುಮಕೂರು ನಗರಕ್ಕೆ ಬಿಎಂಟಿಸಿ ಬಸ್ ಸೌಲಭ್ಯ ಕಲ್ಪಿಸಿದ ರೀತಿಯಲ್ಲೇ ಮಾಗಡಿ, ಕುಣಿಗಲ್ಗೆ ಮುಂದಿನ ದಿನಗಳಲ್ಲಿ ಬಿಎಂಟಿಸಿ ಬಸ್ ಸೌಲಭ್ಯ ವಿಸ್ತರಿಸಲಾಗುವುದು. ಮೂರು–ನಾಲ್ಕು ವರ್ಷಗಳ ಒಳಗೆ ಮೆಜೆಸ್ಟಿಕ್ನಲ್ಲಿ ಅತಿದೊಡ್ಡ ಬಸ್ ನಿಲ್ದಾಣ ನಿರ್ಮಿಸುವ ಗುರಿ ಇದೆ ಎಂದರು.

ಹೊಸಕೋಟೆ ಮತ್ತು ಶಿಡ್ಲಘಟ್ಟ ಶಾಸಕರ ಮನವಿ ಮೇರೆಗೆ ಹೊಸಕೋಟೆಯಿಂದ ಚಿಕ್ಕನಹಳ್ಳಿ, ತಾವರೆಕೆರೆ, ನರಸಾಪುರ, ವೇಮಗಲ್ವರೆಗೆ ಹಾಗೂ ಶಿಡ್ಲಘಟ್ಟದ ಎಚ್ಕ್ರಾಸ್ನಿಂದ ಜಂಗಮಕೋಟೆ, ದೇವನಹಳ್ಳಿ, ಯಲಹಂಕ ಮಾರ್ಗವಾಗಿ ಬಿಎಂಟಿಸಿ ಬಸ್ ಸೇವೆ ವಿಸ್ತರಿಸಲು ವ್ಯವಸ್ಥಾಪಕ ನಿರ್ದೇಶಕರಿಗೆ ಸರ್ವೆ ಮಾಡಿ ವರದಿ ನೀಡುವಂತೆ ಆದೇಶಿಸಿದರು.

ಹೊಸಕೋಟೆಯ ಕೊಳತೂರು ಭಾಗದಲ್ಲಿ ಸ್ಯಾಟಲೈಟ್ ಬಸ್ ನಿಲ್ದಾಣ ಮತ್ತು ಕೆಎಸ್ಆರ್ಟಿಸಿ ಬಸ್ ಡಿಪೊಗೆ ಜಾಗದ ವ್ಯವಸ್ಥೆ ಮಾಡಿಕೊಟ್ಟಲ್ಲಿ ಅನುಮೋದನೆ ನೀಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಬಿಎಂಟಿಸಿ ವ್ಯವಸ್ಥಾಪಕ ಜಿ.ಟಿ. ಪ್ರಭಾಕರ್, ಅಧ್ಯಕ್ಷ ವಿ.ಎಸ್. ಆರಾಧ್ಯ, ಉಪಾಧ್ಯಕ್ಷ ನಿಕೇತ್ ರಾಜ್, ವ್ಯವಸ್ಥಾಪಕ ನಿರ್ದೇಶಕ ಶಿವಕುಮಾರ್ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-15-1807577809

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.