ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುದೂರು | ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು

Published 12 ಮೇ 2024, 15:16 IST
Last Updated 12 ಮೇ 2024, 15:16 IST
ಅಕ್ಷರ ಗಾತ್ರ

ಕುದೂರು: ಮಾಗಡಿ - ತಾಳೇಕೆರೆ ಮುಖ್ಯ ರಸ್ತೆಯ ಪ್ರಸಾದ್ ನಗರ ಬಳಿ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಮೃತಪಟ್ಟಿದ್ದಾರೆ.

ಕುಣಿಗಲ್ ತಾಲ್ಲೂಕಿನ ಕುಂದೂರು ಗ್ರಾಮದ ಜಿ. ಲಿಖಿತ್ (27) ಮೃತರು.

ಮೇ 7ರಂದು ಮಾಗಡಿ - ತಾಳೇಕೆರೆ ಮುಖ್ಯ ರಸ್ತೆಯಲ್ಲಿ ಲಿಖಿತ್‌ ಅತಿ ವೇಗವಾಗಿ  ಬೈಕ್‌ ಚಲಾಯಿಸಿಕೊಂಡು ಬಂದು ಆಯತಪ್ಪಿ ಬಿದಿದ್ದರು. ಇದರಿಂದ ತಲೆ, ಕೈ–ಕಾಲಿಗೆ ತೀವ್ರ ಸ್ವರೂಪದ ಗಾಯವಾಗಿತ್ತು.

ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT