ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಕೋಟೆ: ಅಂಬೇಡ್ಕರ್ ಪ್ರತಿಮೆಗೆ ಬೆಂಕಿ, ಗ್ರಾಮ ಉದ್ವಿಗ್ನ

Published 15 ಮೇ 2023, 16:30 IST
Last Updated 15 ಮೇ 2023, 16:30 IST
ಅಕ್ಷರ ಗಾತ್ರ

ಹೊಸಕೋಟೆ (ಬೆಂಗಳೂರು ಗ್ರಾಮಾಂತರ ಜಿಲ್ಲೆ): ತಾಲ್ಲೂಕಿನ ಸೂಲಿಬೆಲೆ ಹೋಬಳಿಯ ಯನಗುಂಟೆ ಗ್ರಾಮದಲ್ಲಿ ಭಾನುವಾರ ತಡರಾತ್ರಿ ದುಷ್ಕರ್ಮಿಗಳು ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಸಿಮೆಎಣ್ಣೆ ಮತ್ತು ಡಿಸೇಲ್ ಸುರಿದು ಬೆಂಕಿ ಹಚ್ಚಿದ್ದಾರೆ.

ಘಟನೆ ನಂತರ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಪೊಲೀಸ್‌ ಬಂದೋಬಸ್ತ್ ಮಾಡಲಾಗಿದೆ. 

ಕಿಡಿಗೇಡಿಗಳನ್ನು ಬಂಧಿಸುವಂತೆ ಗ್ರಾಮಸ್ಥರು ಮತ್ತು ದಲಿತ ಸಂಘಟನೆಗಳು ಸೋಮವಾರ ರಾಷ್ಟೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಆದಷ್ಟು ಬೇಗ ದುಷ್ಕರ್ಮಿಗಳನ್ನು ಬಂಧಿಸಬೇಕು. ಇಲ್ಲದಿದ್ದರೆ ರಾಜ್ಯಾದಂತ ಹೋರಾಟ ನಡೆಸುವುದಾಗಿ ಕರ್ನಾಟಕ ಅಹಿಂದ ರಕ್ಷಣಾ ಸಮಿತಿ ಸಂಸ್ಥಾಪನಾ ರಾಜ್ಯಾಧ್ಯಕ್ಷರಾದ ಕಿರಣ್ ಕುಮಾರ್ ಎಚ್ಚರಿಕೆ ನೀಡಿದರು.

ಪ್ರತಿಭಟನಾ ಸ್ಥಳಕ್ಕೆ ಬಂದ ಡಿವೈಎಸ್‌ಪಿ ಸ್.ಎಸ್.ಪಾಟೀಲ ಘಟನೆಗೆ ಕಾರಣರಾದವರನ್ನು ಬಂಧಿಸುವ ಭರವಸೆ ನೀಡಿದ ನಂತರ ಪ್ರತಿಭಟನೆ ವಾಪಸ್ ಪಡೆಯಲಾಯಿತು.  


ದಲಿತ ಸಂಘಟನೆಗಳ ವಾಬಸಂದ್ರ ಅಮರ್, ಅಹಿಂದ ಸಜ್ಜನ್, ಪ್ರಸನ್ನ, ಯನಗುಂಟೆ ರಘು, ಶೇಖರ್, ಮುತ್ತು, ಸಂಪತ್, ಗ್ರಾಮ ಪಂಚಾಯ್ತಿ ಸದಸ್ಯ ನಾಗರಾಜ್, ಹೆಚ್.ವಿ.ವೆಂಕಟೇಶ್, ಲಕ್ಷ್ಮಣ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
 

ಬೆಂಕಿಯಿಂದ ಕಪ್ಪಾಗಿರುವ ಡಾ. ಬಿ.ಆರ್‌. ಅಂಬೇಡ್ಕರ್ ಪ್ರತಿಮೆ 
ಬೆಂಕಿಯಿಂದ ಕಪ್ಪಾಗಿರುವ ಡಾ. ಬಿ.ಆರ್‌. ಅಂಬೇಡ್ಕರ್ ಪ್ರತಿಮೆ 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT