ಶುಕ್ರವಾರ, 29 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೃಹಲಕ್ಷ್ಮಿ ಯೋಜನೆ ನೋಂದಣಿ: ಸಹಾಯವಾಣಿ ಕೇಂದ್ರ ಆರಂಭ

Published 25 ಜುಲೈ 2023, 16:33 IST
Last Updated 25 ಜುಲೈ 2023, 16:33 IST
ಅಕ್ಷರ ಗಾತ್ರ

ದೇವನಹಳ್ಳಿ: ಗೃಹಲಕ್ಷ್ಮಿ ಯೋಜನೆಗೆ ಜುಲೈ 20ರಿಂದ ಫಲಾನುಭವಿಗಳ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಗ್ರಾಮೀಣ ಭಾಗದ ಫಲಾನುಭವಿಗಳು ಬಾಪೂಜಿ ಸೇವಾಕೇಂದ್ರ ಮತ್ತು ಗ್ರಾಮ ಒನ್ ಕೇಂದ್ರ ಮತ್ತು ನಗರ ಸ್ಥಳೀಯ ಸಂಸ್ಥೆಗಳು, ಕರ್ನಾಟಕ ಒನ್ ಕೇಂದ್ರಗಳಲ್ಲಿ ನೋಂದಾಯಿಸಲು ಅವಕಾಶ ಕಲ್ಪಿಸಲಾಗಿದೆ.

ಫಲಾನುಭವಿಗಳು ಯೋಜನೆಯಡಿ ನೋಂದಾಯಿಸಿಕೊಳ್ಳಲು ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಕೇಂದ್ರಗಳನ್ನು ಸಂಪರ್ಕಿಸಬಹುದು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪ ನಿರ್ದೇಶಕರ ಕಚೇರಿ, ನಂ 206, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ. ದೂರವಾಣಿ ಸಂಖ್ಯೆ 080-29787445.

ದೇವನಹಳ್ಳಿ ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಅಕ್ಷಯ ಭವನ, 2ನೇ ಮಹಡಿ, ಪಿಎಲ್‌ಡಿ ಬ್ಯಾಂಕ್ ಕಟ್ಟಡ, ಬಿ.ಬಿ ರಸ್ತೆ, ದೇವನಹಳ್ಳಿ
ಮೊಬೈಲ್ ಸಂಖ್ಯೆ:7795547823.

ದೊಡ್ಡಬಳ್ಳಾಪುರ ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಎಪಿಎಂಸಿ ಬಿಲ್ಡಿಂಗ್, ಒಳ ಆವರಣ, ಟಿ.ಬಿ ಸರ್ಕಲ್ ಹತ್ತಿರ, ದೊಡ್ಡಬಳ್ಳಾಪುರ
ಮೊಬೈಲ್ ಸಂಖ್ಯೆ: 7795548195.

ಹೊಸಕೋಟೆ ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಕೆ.ಆರ್.ರೋಡ್, ಪೋಸ್ಟ್ ಆಫೀಸ್ ಹತ್ತಿರ, ಹೊಸಕೋಟೆ.
ಮೊಬೈಲ್ ಸಂಖ್ಯೆ:9513717382.

ನೆಲಮಂಗಲ ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಎಚ್. ಹೊನ್ನದಾಸೇಗೌಡ ಬಿಲ್ಡಿಂಗ್, ಎನ್.ಹೆಚ್ 4, ಸೊಂಡೆಕೊಪ್ಪ ಬೈಪಾಸ್, ನೆಲಮಂಗಲ.
ದೂರವಾಣಿ ಸಂಖ್ಯೆ:080-27722177 ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT