ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಗೂಳ್ಯಕ್ಕೆ ಶಿಘ್ರವೇ ರಸ್ತೆ: ಸಚಿವ ಕೆ.ಎಚ್‌.ಮುನಿಯಪ್ಪ

Published 8 ಜನವರಿ 2024, 7:48 IST
Last Updated 8 ಜನವರಿ 2024, 7:48 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ‘ಮುಖ್ಯ ರಸ್ತೆಯಿಂದ ಕೇವಲ 1 ಕಿ.ಮೀ ದೂರದ ನಮ್ಮ ಗ್ರಾಮಕ್ಕೆ ರಸ್ತೆ ನಿರ್ಮಿಸಿಕೊಡುವಂತೆ ದಶಕಗಳಿಂದಲು ಮನವಿ ಮಾಡುತ್ತಲೇ ಬಂದಿದ್ದರು ಸಹ ಇದುವರೆಗೂ ರಸ್ತೆ ಸರಿಯಾಗಿಲ್ಲ’ ಎಂದು ಗೂಳ್ಯ ಗ್ರಾಮಸ್ಥರು ಭಾನುವಾರ ಗ್ರಾಮಕ್ಕೆ ಭೇಟಿ ನೀಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌.ಮುನಿಯಪ್ಪ ಅವರಿಗೆ ಮನವಿ ಮಾಡಿದರು.

ಕಿರಿದಾದ ಹಾಗೂ ಗುಂಡಿಗಳ ರಸ್ತೆಯಲ್ಲಿ ಸೈಕಲ್‌, ಬೈಕ್‌ಗಳು ಸಹ ಬರುವುದು ಕಷ್ಟವಾಗಿದೆ. ಅದರಲ್ಲೂ ಮಳೆಗಾಲದಲ್ಲಿ ರೈತರು ತರಕಾರಿ ಸೇರಿದಂತೆ ಇತರೆ ಸರಕುಗಳನ್ನು ನಗರದ ಮಾರುಕಟ್ಟೆಗೆ ಕೊಂಡೊಯ್ಯಲು ಪರದಾಡುವಂತಾಗಿದೆ. ರಸ್ತೆ ನಿರ್ಮಾಣಕ್ಕೆ ಭೂಮಿ ಬಿಟ್ಟುಕೊಡಲು ರಸ್ತೆ ಬದಿಯಲ್ಲಿನ ರೈತರು ಸಿದ್ದರಿದ್ದಾರೆ. ಆದರೆ ರಸ್ತೆ ನಿರ್ಮಾಣಕ್ಕೆ ಅಗತ್ಯ ಇರುವ ಆರ್ಥಿಕ ನೆರವನ್ನು ನೀಡಿಲ್ಲ ಎಂದು ಗ್ರಾಮಸ್ಥರು ದೂರಿದರು.

ಗ್ರಾಮಸ್ಥರ ಮನವಿಗೆ ಪ್ರತಿಕ್ರಿಯಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌.ಮುನಿಯಪ್ಪ, ಇನ್ನೂ 15 ದಿನಗಳಲ್ಲಿ ರಸ್ತೆ ಕಾಮಗಾರಿಯ ಪ್ರಾಥಮಿಕ ಕಾಮಗಾರಿ ಪ್ರಾರಂಭಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು. ಇತ್ತೀಚಿನ ದಿನಗಳಲ್ಲಿ ಹಳ್ಳಿಗಳಿಗೂ ಸಹ ವಾಹನಗಳ ಸಂಚಾರ ಹೆಚ್ಚಾಗಿದೆ. ಹಾಗಾಗಿ ರಸ್ತೆ ವಿಸ್ತಾರವಾಗಿ ನಿರ್ಮಿಸಲು ರಸ್ತೆ ಬದಿಯಲ್ಲಿನ ರೈತರು ಯಾವುದೇ ಅಡ್ಡಿಪಡಿಸದೆ ಅಧಿಕಾರಿಗಳಿಗೆ ಸಹಕಾರ ನೀಡಬೇಕು. ಆಗ ಮಾತ್ರ ಕಾಮಗಾರಿ ತ್ವರಿತವಾಗಿ ಮಾಡಿ ಮುಗಿಸಲಾಗುವುದು ಎಂದರು.

ಸ್ಥಳದಲ್ಲೇ ಇದ್ದ ತಹಶೀಲ್ದಾರ್‌ ವಿಭಾವಿದ್ಯಾ ರಾಥೋಡ್‌, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎನ್‌.ಮುನಿರಾಜು ಅವರಿಗೆ 15 ದಿನಗಳ ಒಳಗೆ ರಸ್ತೆ ಕಾಮಗಾರಿಯನ್ನು ಪ್ರಾರಂಭಿಸಿ ವರದಿ ನೀಡಿವಂತೆ ಸಚಿವರು ಸೂಚನೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT