ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

2.68 ಲಕ್ಷ ಮತಗಳ ಅಂತರದ ಭರ್ಜರಿ ಗೆಲುವು! ಲೋಕಸಭೆ ಪ್ರವೇಶಿಸಿದ ಡಾಕ್ಟರ್ ಮಂಜುನಾಥ್

ಬೆಂಗಳೂರು ಗ್ರಾಮಾಂತರದಲ್ಲಿ ಡಾ. ಮಂಜುನಾಥ್ ಭರ್ಜರಿ ಗೆಲುವು
Published 4 ಜೂನ್ 2024, 13:38 IST
Last Updated 4 ಜೂನ್ 2024, 13:38 IST
ಅಕ್ಷರ ಗಾತ್ರ

ರಾಮನಗರ: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್ ಅವರು, ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಅವರ ವಿರುದ್ಧ 2.68 ಲಕ್ಷ ಮತಗಳ ಅಂತರದಲ್ಲಿ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಮಂಜುನಾಥ್ ಅವರು 10,79,002 ಮತಗಳನ್ನು ಪಡೆದು ಜಯದ ನಗೆ ಬೀರಿದರೆ, ಸುರೇಶ್ ಅವರು 8,09,355 ಮತಗಳನ್ನು ಪಡೆದು ತೀವ್ರ ಹಿನ್ನಡೆ ಅನುಭವಿಸಿದ್ದಾರೆ.

ರಾಮನಗರ ಹೊರವಲಯದಲ್ಲಿರುವ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಮತ ಎಣಿಕೆಯಲ್ಲಿ, ಆರಂಭದಿಂದಲೂ ಮಂಜುನಾಥ್ ಅವರು ಮುನ್ನಡೆ ಕಾಯ್ದುಕೊಂಡೇ ಬಂದರು. ಅಂತಿಮವಾಗಿ 2.68 ಲಕ್ಷ ಮತಗಳ ಅಂತರದಲ್ಲಿ ಗೆಲುವಿನ ದಡ ಸೇರಿದರು. ಜಯದೇವ ಹೃದ್ರೋಗ ಸಂಸ್ಥೆಯಿಂದ ನಿವೃತ್ತಿಯಾದ ಬಳಿಕ ರಾಜಕೀಯ ಇನ್ನಿಂಗ್ಸ್ ಶುರು ಮಾಡಿದ ಮಂಜುನಾಥ್, ಅದ್ಧೂರಿ ಓಪನಿಂಗ್ ಮಾಡಿದ್ದಾರೆ.

ಗೆಲುವು ಸಾಧಿಸಿದ ಮಂಜುನಾಥ್ ಅವರಿಗೆ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಅವರು ಎಣಿಕೆ ಕೇಂದ್ರದಲ್ಲಿ ಪ್ರಮಾಣಪತ್ರ ವಿತರಿಸಿದರು. ನಂತರ, ಹೊರಕ್ಕೆ ಬಂದ ಮಂಜುನಾಥ್ ಅವರು ಸ್ಥಳದಲ್ಲಿ ಸೇರಿದ್ದ ಬೆಂಬಲಿಗರತ್ತ ಪ್ರಮಾಣಪತ್ರ ಪ್ರದರ್ಶಿಸಿ ಗೆಲುವಿನ ಸಂಭ್ರಮ ಹಂಚಿಕೊಂಡರು. ಪತ್ನಿ ಅನಸೂಯ, ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಅವರಿಗೆ ಸಾಥ್ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT