ಹೊಸಕೋಟೆ (ಬೆಂಗಳೂರು ಗ್ರಾಮಾಂತರ): ಶಾಲೆಯ ಶಿಕ್ಷಕರ ಮತ್ತು ಶಿಕ್ಷಕರ ಸಹಪಾಠಿ ಪುತ್ರನ ಕಿರುಕುಳದಿಂದ ಬೇಸತ್ತ ನಗರದ ಖಾಸಗಿ ಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ನಗರದ ಮಿಲೇನಿಯಂ ಪಬ್ಲಿಕ್ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಓದುತ್ತಿದ್ದ ಪಟ್ಟಣದ ಪಾರ್ವತಿಪುರದ ನಿವಾಸಿ ಸಾರಾ (16) ಜೂನ್ 20 ರಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಶಾಲೆಯ ಆಡಳಿತ ಮಂಡಳಿ ಸದಸ್ಯ, ಇಬ್ಬರು ಶಿಕ್ಷಕರು ಮತ್ತು ಶಿಕ್ಷಕರ ಪುತ್ರ ಸೇರಿ ನಾಲ್ವರ ವಿರುದ್ಧ ಮೃತ ವಿದ್ಯಾರ್ಥಿನಿಯ ಪೋಷಕರು ಜೂನ್ 27ರಂದು ಹೊಸಕೋಟೆ ಪೊಲೀಸ್ ಠಾನೆಯಲ್ಲಿ ದೂರು
ದಾಖಲಿಸಿದ್ದಾರೆ.
ಮಗಳ ಆತ್ಮಹತ್ಯೆಗೆ ಶಾಲೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕರು ಕಾರಣ. ಶಾಲೆಯ ಶಿಕ್ಷಕ ಖಮರ್ ಮತ್ತು ನಳಿನಿ ಎಂಬುವರು ನಮ್ಮ ಮಗಳಿಗೆ ನಿರಂತರ ಕಿರುಕುಳ ನೀಡುತ್ತಿದ್ದರು. ಜೊತೆಗೆ ಶಿಕ್ಷಕ ಖಮರ್ ಅವರ ಮಗ ತನ್ನನ್ನು ಪ್ರೀತಿಸುವಂತೆ ಮಗಳಿಗೆ ಕಿರುಕುಳ ನೀಡುತ್ತಿದ್ದ’ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಹೊಸಕೋಟೆ ಪೊಲೀಸರು ಶಾಲೆಯ ಆಡಳಿತ ಮಂಡಳಿ, ಇಬ್ಬರು ಶಿಕ್ಷಕರು ಹಾಗೂ ವಿದ್ಯಾರ್ಥಿ ಮೇಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.