ಮಂಗಳವಾರ, ಮೇ 17, 2022
27 °C

ಬಿಜ್ಜವಾರ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಭಾಗ್ಯಮ್ಮ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಬಿಜ್ಜವಾರ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷೆಯಾಗಿ ಜೆಡಿಎಸ್ ಬೆಂಬಲಿತ ಭಾಗ್ಯಮ್ಮ ಮತ್ತು ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಬಿಜ್ಜವಾರ ನಾಗರಾಜ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಮಿಲನ ಘೋಷಿಸಿದ್ದಾರೆ.

ಹೋಬಳಿಯ ಬಿಜ್ಜವಾರ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲಾಗಿತ್ತು. ಬುಧವಾರ ನಡೆದ ಚುನಾವಣೆಯಲ್ಲಿ ಈ ಇಬ್ಬರೇ ನಾಮಪತ್ರ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷ ಬಿಜ್ಜವಾರ ನಾಗರಾಜ್ ಮಾತನಾಡಿ, ‘ನಾನು ಡಾ.ಬಿ.ಆರ್. ಅಂಬೇಡ್ಕರ್ ಅವರ ತತ್ವ, ಸಿದ್ಧಾಂತಗಳಲ್ಲಿ ನಂಬಿಕೆ ಇಟ್ಟುಕೊಂಡು ಹೋರಾಟ ಮಾಡಿಕೊಂಡು ಬರುತ್ತಿದ್ದೇನೆ. ಪಂಚಾಯಿತಿ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲವು ಸಾಧಿಸಿದ್ದೆ. ಈಗ ಕಾಂಗ್ರೆಸ್ ಬೆಂಬಲಿತ ಸದಸ್ಯರ ಬೆಂಬಲದಿಂದ ಉಪಾಧ್ಯಕ್ಷನಾಗಿ ಅವಿರೋಧವಾಗಿ ಆಯ್ಕೆಯಾಗಿದ್ದೇನೆ’ ಎಂದರು.

ರಸ್ತೆ, ಕುಡಿಯುವ ನೀರು, ಚರಂಡಿ ವ್ಯವಸ್ಥೆ, ನರೇಗಾ ಯೋಜನೆಯಡಿ ಅಭಿವೃದ್ಧಿ ಕಾಮಗಾರಿಗಳು, ಶೌಚಾಲಯ ನಿರ್ಮಾಣ ಸೇರಿದಂತೆ ಪಂಚಾಯಿತಿಯಿಂದ ಏನೇನು ಅಭಿವೃದ್ಧಿ ಕಾರ್ಯಕ್ರಮಗಳು ಮಾಡಲಿಕ್ಕೆ ಅವಕಾಶವಿದೆಯೋ ಅವುಗಳನ್ನು ಪಕ್ಷಾತೀತವಾಗಿ ಎಲ್ಲರೊಟ್ಟಿಗೆ ಸಮನ್ವಯತೆಯಿಂದ ಮಾಡಿಕೊಂಡು ಹೋಗುತ್ತೇವೆ ಎಂದರು.

ತಾಲ್ಲೂಕು ಪಂಚಾಯಿತಿ ಸದಸ್ಯ ಎಸ್. ಭೀಮರಾಜ್ ಮಾತನಾಡಿ, ಪಂಚಾಯಿತಿಗೆ ಆಯ್ಕೆಯಾಗಿರುವ ಸದಸ್ಯರು ಜನರ ಆಶೋತ್ತರಗಳಿಗೆ ತಕ್ಕಂತೆ ಜನಪರವಾದ ಕೆಲಸಗಳು ಮಾಡುವ ಮೂಲಕ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡಬೇಕು. ಸರ್ಕಾರದಿಂದ ಸಿಗುವಂತಹ ಎಲ್ಲಾ ಸವಲತ್ತುಗಳನ್ನು ಜನರಿಗೆ ತಲುಪಿಸುವಂತಹ ಕೆಲಸ ಮಾಡಬೇಕು ಎಂದು ಹೇಳಿದರು.

ನೂತನ ಅಧ್ಯಕ್ಷೆ ಮತ್ತು ಉಪಾಧ್ಯಕ್ಷರನ್ನು ಜೆಡಿಎಸ್ ಹಾಗೂ ಕಾಂಗ್ರೆಸ್ ಮುಖಂಡರು ಅಭಿನಂದಿಸಿದರು. ಜೆಡಿಎಸ್ ಹೋಬಳಿ ಘಟಕದ ಅಧ್ಯಕ್ಷ ಕೋರಮಂಗಲ ಎಂ. ವೀರಪ್ಪ, ಪ್ರಧಾನ ಕಾರ್ಯದರ್ಶಿ ಕಲ್ಯಾಣ್ ಕುಮಾರ್ ಬಾಬು, ಮಹದೇವಪ್ಪ, ದೇವರಾಜು, ಸೋತಪ್ಪ, ಭೈಯಣ್ಣ, ಮನೋಜ್, ಕಾಂಗ್ರೆಸ್ ಮುಖಂಡರಾದ ಮಂಜುನಾಥ್, ಪಿ. ನಾಗೇಂದ್ರ, ಲಕ್ಷ್ಮಣ್, ನಾಗರಾಜ್, ಶ್ರೀನಿವಾಸ್, ರಮೇಶ್, ಮುನೇಗೌಡ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು