ತಾ.ಪಂ.ಅಧ್ಯಕ್ಷ ಸ್ಥಾನಕ್ಕೆ ಭಾರತಿ ಲಕ್ಷ್ಮಣ್ ಗೌಡ ರಾಜೀನಾಮೆ

ಶನಿವಾರ, ಜೂಲೈ 20, 2019
25 °C
DEVANAHALLI

ತಾ.ಪಂ.ಅಧ್ಯಕ್ಷ ಸ್ಥಾನಕ್ಕೆ ಭಾರತಿ ಲಕ್ಷ್ಮಣ್ ಗೌಡ ರಾಜೀನಾಮೆ

Published:
Updated:
Prajavani

ದೇವನಹಳ್ಳಿ: ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಭಾರತಿ ಲಕ್ಷ್ಮಣ್ ಗೌಡ ರಾಜೀನಾಮೆ ಸಲ್ಲಿಸಿದರು.

ಜಿಲ್ಲಾಧಿಕಾರಿ ಸಿ.ಎಸ್.ಕರೀಗೌಡರಿಗೆ ರಾಜಿನಾಮೆ ಸಲ್ಲಿಸಿ ಮಾತನಾಡಿದ ಅವರು, ‘ಪಕ್ಷದ ಆದೇಶ ಮತ್ತು ವೈಯಕ್ತಿಕ ಕಾರಣದಿಂದ ರಾಜೀನಾಮೆ ನೀಡಿದ್ದೇನೆ. ನನ್ನ ಆಡಳಿತದಲ್ಲಿ ಸಹಕರಿಸಿದ ತಾಲ್ಲೂಕು ಪಂಚಾಯಿತಿ ಸದಸ್ಯರಿಗೆ ಅಭಿನಂದನೆ ತಿಳಿಸುವೆ’ ಎಂದು ಹೇಳಿದರು.

‘ಕಾಂಗ್ರೆಸ್ ಪಕ್ಷ ನನ್ನ ಮೇಲೆ ವಿಶ್ವಾಸವಿಟ್ಟು ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿತ್ತು. ಮೂರು ವರ್ಷಗಳ ನನ್ನ ಆಡಳಿತಾವಧಿಯಲ್ಲಿ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಕೆಲವೊಂದು ಸಮಸ್ಯೆಗಳಿಗೆ ಪರಿಹಾರ ಸಿಕ್ಕಿದೆ’ ಎಂದು ತಿಳಿಸಿದರು.

ವಿಪರ್ಯಾಸವೆಂದರೆ ಈ ಮೂರು ವರ್ಷಗಳ ಆಡಳಿತದಲ್ಲಿ ನಿರಂತರ ಬರದಿಂದಾಗಿ ಕುಡಿಯುವ ನೀರು, ಪಶು ಮೇವು ಕೊರತೆ ನಿವಾರಣೆ ಸವಾಲಾಗಿತ್ತು. ಕಂದಾಯ ಇಲಾಖೆ, ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಇಲಾಖೆ ಅಧಿಕಾರಿಗಳ ಮೇಲೆ ಒತ್ತಡ ತಂದು ಪರಿಸ್ಥಿತಿ ಸುಧಾರಣೆ ಮಾಡಲಾಗಿದೆ’ ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯರಾದ ಲಕ್ಷ್ಮಿನಾರಾಯಣ, ಕೆ.ಸಿ.ಮಂಜುನಾಥ್ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !