ಶುಕ್ರವಾರ, ಫೆಬ್ರವರಿ 26, 2021
31 °C

3 ತಿಂಗಳಲ್ಲಿ ಬೈಯಾಪ ಕಾಮಗಾರಿಗಳು ಪೂರ್ಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತಾಲ್ಲೂಕಿನ ಲಿಂಗಧೀರಗೊಲ್ಲಹಳ್ಳಿಯಿಂದ ದ್ಯಾವರಹಳ್ಳಿ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಯನ್ನು ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಸಿ.ಮಂಜುನಾಥ್ ಪರಿಶೀಲಿಸಿದರು

ದೇವನಹಳ್ಳಿ: ಬೆಂಗಳೂರು ವಿಮಾನ ನಿಲ್ದಾಣ ಅಭಿವೃದ್ಧಿ ಪ್ರಾಧಿಕಾರದ (ಬೈಯಾಪ) ವತಿಯಿಂದ ಬಿಡುಗಡೆಕೊಂಡ ಅನುದಾನದಿಂದ ನಡೆಸಲಾಗುತ್ತಿರುವ ಎಲ್ಲ ಕಾಮಗಾರಿಗಳು ಮುಂದಿನ ಮೂರು ತಿಂಗಳಲ್ಲಿ ಮುಗಿಯಲಿವೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಸಿ.ಮಂಜುನಾಥ್‌ ತಿಳಿಸಿದರು.

ತಾಲ್ಲೂಕಿನ ದ್ಯಾವರಹಳ್ಳಿಯಿಂದ ಲಿಂಗಧೀರ ಗೊಲ್ಲಹಳ್ಳಿಯ ಕೆರೆಯವರೆಗಿನ ರಸ್ತೆ ಕಾಮಗಾರಿಯನ್ನು ಪರಿಶೀಲಿಸಿ ಅವರು ಮಾತನಾಡಿದರು.  ಕುಂದಾಣ ಹೋಬಳಿ ವ್ಯಾಪ್ತಿಯಲ್ಲಿ ಪ್ರಾಧಿಕಾರದ ವತಿಯಿಂದ ಒಟ್ಟು ₹8 ಕೋಟಿ ಅನುದಾನ ಬಿಡುಗಡೆಯಾಗಿದೆ. ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದ ಸಂದರ್ಭದಲ್ಲಿ ಕೆಲವೊಂದು ಕಾಮಗಾರಿ ಶಂಕುಸ್ಥಾಪನೆ ಮಾಡಿರಲಿಲ್ಲ. ಪ್ರಸ್ತುತ ಮೈತ್ರಿ ಸರ್ಕಾರದಲ್ಲಿ ಎಲ್ಲ ಕಾಮಗಾರಿಗಳು ವೇಗ ಪಡೆದುಕೊಂಡಿದೆ ಎಂದರು.

ಪ್ರಾಧಿಕಾರದ ವತಿಯಿಂದ ಬೆಂಗಳೂರು ಉತ್ತರ ತಾಲ್ಲೂಕು, ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಒಟ್ಟು ₹ 51 ಕೋಟಿ ಅನುದಾನದ ಕಾಮಗಾರಿಗಾಗಿ ಈಗಾಗಲೇ ಟೆಂಡರ್ ಕರೆದು ಚಾಲನೆ ನೀಡಲಾಗಿದೆ ಎಂದು ತಿಳಿಸಿದರು. ಬಿಡುಗಡೆಯಾಗಿರುವ ಮತ್ತು ವಿವಿಧ ಇಲಾಖೆಯಲ್ಲಿರುವ ಯಾವುದೇ ಅನುದಾನವು ಸರ್ಕಾರ ಹಿಂಪಡೆಯುವುದಿಲ್ಲ. ಸೂಕ್ತ ಮಾಹಿತಿ ಪಡೆಯದೆ ಕೆಲವರು ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಹಿಂದಿನ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಅನೇಕ ಯೋಜನೆಗಳು ಮತ್ತು ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಭರವಸೆಯನ್ನು ಈಡೇರಿಸಲು ಬದ್ಧ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಈಗಾಗಲೇ ತಿಳಿಸಿದ್ದಾರೆ ಎಂದರು. ಜಿಲ್ಲಾ ಪಂಚಾಯಿತಿ ಅನುದಾನ ಕಡಿತಗೊಳಿಸುವುದಿಲ್ಲ. ಜಿಲ್ಲಾ ಪಂಚಾಯಿತಿ ಅನುದಾನ ನೀಡುವುದು, ಕುಡಿಯುವ ನೀರು, ಶಾಲಾ ಕಟ್ಟಡಗಳ ದುರಸ್ತಿ, ಚರಂಡಿ ನಿರ್ಮಾಣ, ಮೂಲ ಸೌಲಭ್ಯಕ್ಕೆ ಮಾತ್ರ ಆದ್ಯತೆ ನೀಡಲೇಬೇಕು. ಬೃಹತ್ ಯೋಜನೆಗಳಿಗೆ ಅನುದಾನ ವಿಳಂಬವಾಗುವ ಸಾಧ್ಯತೆ ಇದೆ ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿ ಸದಸ್ಯ ಕೆ.ವಿ.ಸ್ವಾಮಿ, ಮುಖಂಡ ಸೋಮಣ್ಣ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು