ಭಾನುವಾರ, ಸೆಪ್ಟೆಂಬರ್ 26, 2021
21 °C

ಡಿ.ಕೆ. ಶಿವಕುಮಾರ್ ಭೇಟಿ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೊಡ್ಡಬಳ್ಳಾಪುರ: ಶಾಸಕ ಟಿ. ವೆಂಕಟರಮಣಯ್ಯ ನೇತೃತ್ವದಲ್ಲಿ ಮಧುರೆ, ದೊಡ್ಡಬೆಳವಂಗಲ, ಸಾಸಲು ಹೋಬಳಿಯ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ಆಸ್ಪತ್ರೆಯ ದಾದಿಯರಿಗೆ ಕಾಂಗ್ರೆಸ್‌ ಸಹಾಯಹಸ್ತ ಕಾರ್ಯಕ್ರಮವು ಆ. 19ರಂದು ಮಧ್ಯಾಹ್ನ 12ಗಂಟೆಗೆ ತಾಲ್ಲೂಕಿನ ದೊಡ್ಡಬೆಳವಂಗಲದಲ್ಲಿ ಹಾಗೂ ಮಧ್ಯಾಹ್ನ 2.30ಕ್ಕೆ ಕೊನಘಟ್ಟದಲ್ಲಿ ಗ್ರಾಮದಲ್ಲಿ ನಡೆಯಲಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕೇಂದ್ರದ ಮಾಜಿ ಸಚಿವ ಎಂ. ವೀರಪ್ಪ ಮೊಯ್ಲಿ, ಮಾಜಿ ಸಚಿವ ಟಿ.ಬಿ. ಜಯಚಂದ್ರ, ಶಾಸಕ ಶರತ್ ಬಚ್ಚೇಗೌಡ, ರಾಜ್ಯಸಭಾ ಸದಸ್ಯ ಡಾ.ಎಲ್. ಹನುಮಂತಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯ ಪಿ.ಆರ್. ರಮೇಶ್ ಭಾಗವಹಿಸಲಿದ್ದಾರೆ ಎಂದು ಕೆಪಿಸಿಸಿ ಸದಸ್ಯ ಜಿ. ಲಕ್ಷ್ಮೀಪತಿ ತಿಳಿಸಿದ್ದಾರೆ.

ಮೂರು ದಿನ ದೇವಾಲಯ ಬಂದ್‌

ದೊಡ್ಡಬಳ್ಳಾಪುರ: ಕೊರೊನಾ ಸೋಂಕು ಹರಡುವುದನ್ನು ತಡೆಯಲು ಆ. 20 ರಿಂದ 22ರವರೆಗೆ ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯಕ್ಕೆ ಸಾರ್ವಜನಿಕರ ಭೇಟಿಯನ್ನು ನಿಷೇಧಿಸಲಾಗಿದೆ.

ಶುಕ್ರವಾರ ಸರ್ಕಾರಿ ರಜೆ ಇರುವುದರಿಂದ ದೇವಾಲಯಕ್ಕೆ ಭಕ್ತಾದಿಗಳ ಸಂಖ್ಯೆ ಹೆಚ್ಚಾಗುವ ನಿರೀಕ್ಷೆ ಇದೆ. ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳಷ್ಟೇ ಅಲ್ಲದೆ ಖಾಸಗಿ ದೇವಾಲಯಗಳಲ್ಲೂ ಭಕ್ತಾದಿಗಳ ಭೇಟಿಯನ್ನು ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.